Air India ವಿಮಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ , ಆರೋಪಿ ವಿಮಾನ ಪ್ರಯಾಣದಿಂದ ಬ್ಯಾನ್..!!
Air India ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿಯನ್ನ ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್ ಇಂಡಿಯಾ ಕಂಪನಿ ಆದೇಶ ಹೊರಡಿಸಿದೆ.
ಆರೋಪಿ ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ನಿರ್ಧಾರ ತೆಗೆದುಕೊಂಡಿದೆ.
ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ.
ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ.
ನ್ಯೂಯಾರ್ಕ್ ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಈ ಘಟನೆ ನಡೆದಿತ್ತು.
ಮಹಿಳೆ ಏರ್ ಇಂಡಿಯಾಗೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈತನ ವಿರುದ್ಧ ಜನವರಿ 4ರಂದು ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಮಿಶ್ರಾನನ್ನು ಬಂಧಿಸಿ ದೆಹಲಿಗೆ ಕರೆತರಲಾಗಿತ್ತು.








