ಏರ್ ಇಂಡಿಯಾ ಟಾಟಾ ಗೆ ಹಸ್ತಾಂತರ – ಓದಿ ಈ ದಿನದ ಟಾಪ್ 10 ಸುದ್ದಿಗಳು….
01ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2 ಲಕ್ಷದ 80 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇದೇ ಅವಧಿಯಲ್ಲಿ 573 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
02 ಕಾಂಗ್ರೆಸ್ ಹಿರಿಯ ಎಂಎಲ್ ಸಿ ಸಿಎಂ ಇಬ್ರಾಹಿಂ ಅವರು ಶೀಘ್ರದಲ್ಲಿಯೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿದ್ದಾರೆ. ಬಿ.ಕೆ.ಹರಿ ಪ್ರಸಾದ್ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ನೇಮಕ ಮಾಡಿದ ಬೆನ್ನಲ್ಲೆ ಸಿ.ಎಂ ಇಬ್ರಾಹಿಂ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ.
03ಮುಂದಿನ ಪಂಚ ರಾಜ್ಯಗಳ ಚುನಾವಣೆಯ ಬಳಿಕ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಅಪ್ರಸ್ತುತ ಆಗಲಿದೆ ಎಂದು ಪಂಚ ರಾಜ್ಯ ಚುನಾವಣೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಪಂಜಾಬ್ನ್ಲ್ಲಿ ಅಧಿಕಾರ ಕಳೆದುಕೊಳ್ಳಲಿದ್ದಾರೆ. ಗೋವಾದಲ್ಲಿ ಅಧಿಕಾರಕ್ಕೆ ಬರುವ ಪರಿಸ್ಥಿತಿಯೇ ಇಲ್ಲ. ಮುಂದಿನ ಚುನಾವಣೆಯ ಬಳಿಕ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಅಪ್ರಸ್ತುತ ಆಗಲಿದೆ ಎಂದಿದ್ದಾರೆ.
04ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ, ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಕೊಡಗಿನಲ್ಲಿ ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ ಎಂದು ತಿಳಿಸಿದರು.
05ರಾಜ್ಯದಲ್ಲಿ ಮತ್ತೆ ಕೇಸರಿ ಶಾಲು ವರ್ಸಸ್ ಹಿಜಾಬ್ ಫೈಟ್ ಶುರುವಾಗಿದ್ದು, ಮಂಗಳೂರು, ಉಡುಪಿ ಮೂಲದ ಕೆಲವು ಶಾಲೆಗಳ ವಿದ್ಯಾರ್ಥಿಗಳು ಈ ಬಗ್ಗೆ ಪ್ರೊಟೆಸ್ಟ್ ನಡೆಸುತ್ತಿದ್ದಾರೆ. ಈ ಮಧ್ಯೆ ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ನಮಗೆ ಯಾವುದೇ ಆನ್ಲೈನ್ ಕ್ಲಾಸ್ ಗಳು ಬೇಡ ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.
06 Good News – ಕೋವಿಡ್ ಲಸಿಕೆ ಇನ್ನು ಮುಂದೆ ಆಸ್ಪತ್ರೆ ಕ್ಲೀನಿಕ್ ಗಳಲ್ಲಿ ಲಭ್ಯ
Covaxin ಮತ್ತು Covishield ಈಗ ಸಾಮಾನ್ಯ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಅವರು ಗುರುವಾರ ಈ ಎರಡು ಕೋವಿಡ್ ಲಸಿಕೆಗಳಿಗೆ ಷರತ್ತುಬದ್ಧ ಮಾರುಕಟ್ಟೆ ಅನುಮೋದನೆ ನೀಡಿದ್ದಾರೆ.
ಕೆಲವು ಷರತ್ತುಗಳಿಗೆ ಒಳಪಟ್ಟು ವಯಸ್ಕ ಜನಸಂಖ್ಯೆಗೆ ಈ ಕೋವಿಡ್-19 ಲಸಿಕೆಗಳಿಗೆ ನಿಯಮಿತ ಮಾರುಕಟ್ಟೆ ಅನುಮೋದನೆಯನ್ನು ನೀಡುವಂತೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ವಿಷಯ ತಜ್ಞರ ಸಮಿತಿಯು ಈ ಹಿಂದೆ ಶಿಫಾರಸು ಮಾಡಿತ್ತು.
07 ಏರ್ ಇಂಡಿಯಾದ ಹಸ್ತಾಂತರಕ್ಕೂ ಮುನ್ನ ಪ್ರಧಾನಿ ಭೇಟಿ ಮಾಡಿದ ಟಾಟಾ ಸನ್ಸ್ ಅಧ್ಯಕ್ಷರು
ಟಾಟಾ ಗ್ರೂಪ್‌ಗೆ ಏರ್ ಇಂಡಿಯಾವನ್ನು ಅಧಿಕೃತ ಹಸ್ತಾಂತರಿಸುವ ಮೊದಲು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಮತ್ತು ಟಾಟಾ ಅಧ್ಯಕ್ಷರ ಭೇಟಿಯ ಫೋಟೋವನ್ನು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ.
08 ಜಾರ್ಖಾಂಡ್ ನಲ್ಲಿ ರೈಲು ಹಳಿ ಸ್ಪೋಟಿಸಿದ ನಕ್ಸಲರು – ಸಂಚಾರ ಸ್ಥಗಿತ.
ಜಾರ್ಖಂಡ್-ಬಿಹಾರ ಬಂದ್ ವೇಳೆ ನಕ್ಸಲರು ರೈಲ್ವೆ ಹಳಿಗಳನ್ನ ಗುರಿಯಾಗಿಸಿಕೊಂಡು ಹಳಿ ಸ್ಪೋಟಿಸಿದ್ದಾರೆ. ಚಿಚಾಕಿ ಮತ್ತು ಕರ್ಮಬಂಧ್ ರೈಲು ನಿಲ್ದಾಣಗಳ ನಡುವೆ ನಕ್ಸಲರು ರೈಲು ಹಳಿಗಳನ್ನು ಸ್ಫೋಟಿಸಿದ್ದಾರೆ.
ರೈಲು ಹಳಿಗಳ ಸ್ಪೋಟದಿಂದಾಗಿ ಹೌರಾ ಮತ್ತು ನವದೆಹಲಿ ರೈಲು ಮಾರ್ಗದ ಸಂಚಾರ ಸ್ಥಗಿತಗೊಂಡಿದೆ. ರೈಲ್ವೇ ಹಳಿ ತಪ್ಪಿದ ಬಗ್ಗೆ ಮಾಹಿತಿ ಬಂದ ತಕ್ಷಣ ಪೂರ್ವ ಕೇಂದ್ರ ರೈಲ್ವೇಯ ಧನಬಾದ್ ರೈಲ್ವೆ ವಿಭಾಗೀಯ ನಿಯಂತ್ರಣ ಕಚೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣವೇ ರೈಲು ಸಂಚಾರವನ್ನು ನಿಲ್ಲಿಸಲಾಯಿತು.
09 ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಮಾಫಿಯಾ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಇದರಲ್ಲಿ ಸುತ್ತಿಗೆ ಹಿಡಿದು ಬರುವ ಪ್ರಜ್ವಲ್ ದೇವರಾಜ್, ಒನ್ಸ್ ಅಪಾನ್ ಎ ಟೈಂ, ದ ಡೆವಿಲ್, ಸ್ಟುಡ್ ಅಗೆನೆಸ್ಟ್ ಟು ದಿ ಗಾಡ್..! ಎಂದು ತೀಷ್ಣವಾಗಿ ಡೈಲಾಗ್ ಹೊಡೆಯುತ್ತಾರೆ. ಇದು ನೋಡುಗರಿಗೆ ಸಖತ್ ಕಿಕ್ ಕೊಡುತ್ತಿದೆ. ಈ ಸಿನಿಮಾವನ್ನು ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಲೋಹಿತ್ ನಿರ್ದೇಶನ ಇವೆ. ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.
10 ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೌನಿ..!!!
ಬಾಲಿವುಡ್ ನಟಿ ಮೌನಿ ರಾಯ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.. ಕೇರಳ ಸ್ಟೈಲ್ ಅಂದ್ರೆ ಸೌತ್ ಇಂಡಿಯನ್ ಸ್ಟೈಲ್ ನಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮದುವೆಯಾಗಿದ್ದಾರೆ.. ದುಬೈ ಮೂಲದ ಉದ್ಯಮಿ ಸೂರಜ್ ನಂಬೂರಿ ಅವರ ಜೊತೆಗೆ ವೈ]ವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.