ಬೆಂಗಳೂರು: ನಗರದ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರು ಹೇಳಿಕೊಂಡ ಲಕ್ಷ ಲಕ್ಷ ವಂಚಿಸಿದ್ದ ಐಶ್ವರ್ಯಗೌಡ ಹಾಗೂ ಪತಿ ಜೈಲಿಂದ ಹೊರ ಬಂದಿದ್ದಾರೆ.
ಗೋಲ್ಡ್ ಶಾಪ್ ಮಾಲೀಕರಿಗೆ ಬರೋಬ್ಬರಿ 14.600 ಕೆಜಿ ಚಿನ್ನಾಭರಣ ಖರೀದಿಸಿ ವಂಚಿಸಿ ಅರೆಸ್ಟ್ ಆಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳು ರಾತ್ರಿಯೇ ರಿಲೀಸ್ ಆಗಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಮಂಗಳವಾರ ರಾತ್ರಿಯೇ ಬಿಡುಗಡೆ ಮಾಡಲಾಗಿದೆ.
ಪ್ರಕರಣದಲ್ಲಿ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಅಲ್ಲಿಂದ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದರು. ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14.600 ಕೆಜಿ ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...








