ದಕ್ಷಿಣ ಭಾರತ ಸಿನಿಮಾರಂಗದ ಕಾರ್ಮಿಕರ ಸಹಾಯಕ್ಕೆ ಬಂದ ಅಜಿತ್ – 10 ಲಕ್ಷ ರೂ. ದೇಣಿಗೆ
ಚೆನ್ನೈ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಇದೀಗ ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ ಅವರು ದಕ್ಷಿಣ ಭಾರತದ ಸಿನಿಮಾ ಕಾರ್ಮಿಕರ ಸಂಘಕ್ಕೆ ಹತ್ತು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಖುದ್ದು ಸಂಘದ ಅಧ್ಯಕ್ಷ ಆರ್ಕೆ ಸೆಲ್ವಮಣಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆನ್ಲೈನ್ ಮೂಲಕ ಹಣ ಕಳುಹಿಸಿದ್ದಾರೆ ಎಂದು ಅಧ್ಯಕ್ಷ ಸೆಲ್ವಮಣಿ ತಿಳಿಸಿದ್ದು, ಕಾರ್ಮಿಕರ ಸಂಘದ ಪರವಾಗಿ ಅಜಿತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಇದಕ್ಕೂ ಮೊದಲು ನಟ ಅಜಿತ್ ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಆನ್ಲೈನ್ ಮೂಲಕ ಸಿಎಂ ನಿಧಿಗೆ ಹಣ ಕಳುಹಿಸಿರುವುದಾಗಿ ಅಜಿತ್ ಮ್ಯಾನೇಜರ್ ಅಧಿಕೃತವಾಗಿ ಮಾಹಿತಿ ನೀಡಿದ್ದರು. ತಮಿಳು ನಟ ಸೂರ್ಯ, ಕಾರ್ತಿ ಸಹೋದರರು ಸಿಎಂ ಪರಿಹಾರ ನಿಧಿಗೆ 1 ಕೋಟಿ ದೇಣಿಗೆ ನೀಡಿದ್ದಾರೆ. ರಜನಿಕಾಂತ್ ಮಗಳು ಸೌಂದರ್ಯ ಕುಟುಂಬದವರು ಒಂದು ಕೋಟಿ ಚೆಕ್ ಹಸ್ತಾಂತರಿಸಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.
‘ಬೆಂಗಳೂರಿಗರೇ ಭಯಪಡಬೇಡಿ, ನಿಮಗಾಗಿ ನಿಮ್ಮ ಸೋನು ಸೂದ್… ಇದ್ದೇನೆ’ – ರಿಯಲ್ ಹೀರೋ ಸೋನು ಸೂದ್








