ಬೆಂಗಳೂರು: ಡಿ.ಜೆ.ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಅಖಂಡ ಶ್ರೀನಿವಾಸ ಮೂರ್ತಿಯರ ಮನೆಯ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮನೆಯನ್ನು ಸಂಪೂರ್ಣವಾಗಿ ಸುಟ್ಟು ಹಾಕಿದ್ದರು. ಘಟನೆ ಬಳಿಕ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಹೀಗಾಗಿ ತಮಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಬೇಕೆಂದು ಕಾಂಗ್ರೆಸ್ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ ಅವರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.
![]()
ಇಂದು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಅಖಂಡ ಶ್ರೀನಿವಾಸ ಮೂರ್ತಿ ಅವರು, ತಮಗೂ ತಮ್ಮ ಕುಟುಂಬಕ್ಕೂ ಪೊಲೀಸ್ ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.









