Akshata Kuki – ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಕನ್ನಡ ಒಟಿಟಿ ಸ್ಪರ್ದಿ ಅಕ್ಷತಾ ಕುಕಿ…
ಸ್ಯಾಂಡಲ್ ವುಡ್ ನ ಹಿರಿತೆರೆ ಮತ್ತು ಕಿರುತೆರೆಯಲ್ಲಿ ಮದುವೆ ಪರ್ವ ಜೋರಾಗಿಯೇ ನಡೆಯುತ್ತಿದೆ. ಇದೀಗ ಬಿಗ್ ಬಾಸ್ ಕನ್ನಡ ಒಟಿಟಿ ಸ್ಪರ್ದಿ ಅಕ್ಷತಾ ಕುಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬಿಗ್ ಬಾಸ್ ಕನ್ನಡ ಓಟಿಟಿ ಸೀಸನ್ 1′ ಶೋನಲ್ಲಿ ಉತ್ತರ ಕರ್ನಾಟಕದ ಭಾಷೆ ಮಾತನಾಡುತ್ತ ಮನಸ್ಸು ಗೆದ್ದಿದ್ದ ದಾಂಡೇಲಿ ಹುಡುಗಿ ಅಕ್ಷತಾ ಕುಕಿ ಕುಟುಂಬದವರು ಹುಡುಕಿದ ಯುವಕನೊಂದಿಗೆ ಸಪ್ತಪದಿ ತುಳಿದಿದ್ದಾರೆ.
ಬೆಳಗಾವಿಯಲ್ಲಿ ಮಾರ್ಚ್ 27ರಂದು ಅಕ್ಷತಾ ಹಾಗೂ ಅವಿನಾಶ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಕುಟುಂಬಸ್ಥರು ಮತ್ತು ಸಂಬಂಧಿಕರು ಸಮ್ಮುಖದಲ್ಲಿ ಮದುವೆ ಕಾರ್ಯಕ್ರಮಗಳು ನಡದಿವೆ. ವರ ಅವಿನಾಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅಕ್ಷತ ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದು, ಧ್ರುವಾ ಸರ್ಜಾ ನಟನೆಯ ಮಾರ್ಟೀನ್ ಚಿತ್ರದಲ್ಲಿಯೂ ಬಣ್ಣ ಹಚ್ಚಿದ್ದಾರೆ.
Akshata Kuki – Bigg Boss Kannada OTT contestant Akshata Kuki who entered married life…