ಹಿಂದಿಯಲ್ಲಿ ‘ಅಲಾ ವೈಕುಂಠಪುರಂಲೋ’ ರಿಮೇಕ್ – ಇವರೇ ನೋಡಿ ನಾಯಕ-ನಾಯಕಿ..!
ಕಳೆದ ವರ್ಷಾರಂಭದಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಗಿದ್ದ ಅಲ್ಲು ಅರ್ಜುನ್ ಅಭಿಯನಯದ ಅಲಾ ವೈಕುಂಠಪುರಂಲೋ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿತ್ತು.. ಸಿನಿಮಾದಲ್ಲಿ ಅಲ್ಲು ಅರ್ಜುನ್ ಪೂಜಾ ಹೆಗ್ಡೆ ಕೆಮಿಸ್ಟ್ರಿಗೆ ಅಭಿಮಾನಿಗಳು ಫಿದಾ ಆಗಿದ್ರು… ಅಲ್ದೇ ಈ ಸಿನಿಮಾದ ಬುಟ್ಟ ಬೊಮ್ಮ ಹಾಡಿನ ಕ್ರೇಜ್ ಇನ್ನೂವರೆಗೂ ಹಾಗೆ ಇದೆ.. ಈ ನಡುವೆ ಈ ಸಿನಿಮಾ ಇದೀಗ ಹಿಂದಿಗೆ ರೀಮೇಕ್ ಆಗಲಿದೆ ಎಂಬ ಸುದ್ದಿ ಭಾರೀ ಚರ್ಚೆಯಾಗ್ತಿದೆ.. ಸಿನಿಮಾದ ನಾಯಕ ನಾಯಕಿ ಕೂಡ ಫೈನಲ್ ಆಗಿದ್ದಾರೆ ಎನ್ಲಾಗ್ತಿದೆ.. ಅಂದ್ಹಾಗೆ ಸಿನಿಮಾದಲ್ಲಿ ಬಾಲಿವುಡ್ ನ ಯುವ ನಟ ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೂನ್ ಅಲ್ಲು ಅರ್ಜುನ್ ಮತ್ತು ಪೂಜಾ ಹೆಗ್ಡೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








