ಅಂತರ್ ಧರ್ಮೀಯ ವಿವಾಹವಾದ ದಂಪತಿಗೆ ರಕ್ಷಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಸೂಚನೆ..!
ಅಂತರ್ ಧರ್ಮೀಯ ವಿವಾಹವಾಗಿದ್ದ ದಂಪತಿಗೆ ರಕ್ಷಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ.. ಈ ದಂಪತಿಗೆ ಬದುಕಿನಲ್ಲಿ ಅವರ ಕುಟುಂಬಸ್ಥರು ಹಸ್ತಕ್ಷೇಪ ಮಾಡುತ್ತಿದ್ದು, ಜೀವಕ್ಕೂ ಬೆದರಿಕೆ ಇದೆ ಎಂಬ ಆರೋಪಗಳಿದೆ. ಹೀಗಾಗಿ ದಂಪತಿಗೆ ರಕ್ಷಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಮೊರದಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶದ ಮೊರದಾಬಾದ್ ಜಿಲ್ಲೆಯ ನಿವಾಸಿಗಳಾಗಿರುವ ಯಾಶಿ ದೇವಿ (20) ಮತ್ತು ಗುಚ್ಚಾನ್ ಖಾನ್(40) ಕಳೆದ ಜನವರಿ 11ರಂದು ಮದುವೆಯಾಗಿದ್ದು, ನಂತರ ಯಾಶಿ ದೇವಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ವಿವಾಹದ ನಂತರ, ಈ ದಂಪತಿ, ತಮ್ಮ ವೈವಾಹಿಕ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಕುಟುಂಬದ ಸದಸ್ಯರು ಹಸ್ತಕ್ಷೇಪ ಮಾಡದಂತೆ, ಪ್ರತಿವಾದಿಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಲೀಲ್ ಕುಮಾರ್ ರೈ ಅವರು ‘ದಂಪತಿ ಪ್ರಾಪ್ತ ವಯಸ್ಕರಾಗಿದ್ದರೆ, ಅವರಿಗೆ ಯಾರ ಹಸ್ತಕ್ಷೇಪವಿಲ್ಲದೆ ಶಾಂತಿಯುತವಾಗಿ ಜೀವನ ನಡೆಸವ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜೊತೆಗೆ ವಿವಾಹಿತ ಮಹಿಳೆ ಸ್ವ ಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿರುವುದಾಗಿ ಹೇಳಿದ್ದಾರೆ. ಆಕೆಯನ್ನು ಬಲವಂತದಿಂದ ಮತಾಂತರಗೊಳಿಸಲಾಗಿದೆ ಎಂಬುದಾಗಿ ಸ್ವತಃ ಆ ಮಹಿಳೆಯೇ ಆರೋಪ ಮಾಡದ ಹೊರತು, ಆಕೆಯ ಸ್ವಾತಂತ್ರ್ಯದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.