ಬೆಂಗಳೂರು: ಇಂದು ನಗರದ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿರು ಹಿನ್ನೆಲೆಯಲ್ಲಿ ಮದ್ಯ ನಿಷೇಧಿಸಲಾಗಿದೆ.
ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.21ರ ಬೆಳಗ್ಗೆ 6ರಿಂದ ಸೆ.22ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಡಿ.ಜೆ.ಹಳ್ಳಿ, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6ರಿಂದ ಸೆ.24ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧಿಸಲಾಗಿದೆ. ಕಮರ್ಷಿಯಲ್ ಸ್ಟ್ರೀಟ್, ಹಲಸೂರು, ಶಿವಾಜಿನಗರದಲ್ಲಿ ಸೆಪ್ಟೆಂಬರ್ 24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧಿಸಲಾಗಿದೆ. ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧಿಸಲಾಗಿದೆ. ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರ ವರೆಗೆ ನಿಷೇಧಿಸಲಾಗಿದೆ.