ಕನ್ನಡ ಚಿತ್ರರಂಗದ ಅಭಿಮಾನಿಗಳಿಗೆ ಒಂದು ಕಹಿ ಸುದ್ದಿ. ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಮುಂದಿನ ವಾರ ಅವರಿಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಅಮೆರಿಕಕ್ಕೆ ಪ್ರಯಾಣಿಸಿದ್ದಾರೆ.
ಈ ಸುದ್ದಿ ಕೇಳಿ ಸ್ಯಾಂಡಲ್ವುಡ್ನ ಗಣ್ಯರು ಶಿವಣ್ಣನಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಅನಾರೋಗ್ಯದ ನಡುವೆಯೂ ತಮ್ಮ ಸಿನಿಮಾ ಕಮಿಟ್ಮೆಂಟ್ಗಳನ್ನು ಪೂರ್ಣಗೊಳಿಸಿ, ‘ಭೈರತಿ ರಣಗಲ್’ ಸಿನಿಮಾವನ್ನು ಯಶಸ್ವಿಯಾಗಿ ಬಿಡುಗಡೆ ಮಾಡಿದ್ದರು.
ಶಿವಣ್ಣ ಅವರು ಶೀಘ್ರವಾಗಿ ಗುಣಮುಖರಾಗಿ ಮತ್ತೆ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
All The Best ಶಿವಣ್ಣ ಬೇಗ ಹುಷಾರಾಗಿ ಬನ್ನಿ ..