ಬೆಂಗಳೂರು: ಸಚಿವರಾಗುವ ಕನಸು ಕಮರುತ್ತಿದ್ದಂತೆ ದಿನನಿತ್ಯ ತಮ್ಮ ಮಿತ್ರಮಂಡಳಿಯನ್ನೇ `ಹಳ್ಳಿಹಕ್ಕಿ’ ಖ್ಯಾತಿಯ ಹೆಚ್.ವಿಶ್ವನಾಥ್ ಕುಕ್ಕಲು ಶುರುಮಾಡಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ಚಲಾಯಿಸುತ್ತಿರುವ ತಮ್ಮ ಮಿತ್ರಮಂಡಳಿಯ ಸದಸ್ಯರು ತಮ್ಮನ್ನು ಕಡೆಗಣನೆ ಮಾಡುತ್ತಿದ್ದಾರೆಂಬ ಅಳಲು ಹೆಚ್.ವಿಶ್ವನಾಥ್ರನ್ನು ಕಾಡಲು ಶುರು ಮಾಡಿದೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಜೆಡಿಎಸ್, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ವಿಶ್ವನಾಥ್ರನ್ನು ತಮ್ಮ ರಾಜಕೀಯ ಗುರುಗಳ ಸ್ಥಾನದಲ್ಲಿ ಇಟ್ಟಿದ್ದ ಮಿತ್ರಮಂಡಳಿಯ ಸದಸ್ಯರೆಲ್ಲಾ ಸರ್ಕಾರ, ಅಧಿಕಾರ ಚಲಾಯಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಮೈತ್ರಿ ಸರ್ಕಾರ ಪತನಗೊಳಿಸಿದಾಗ ಇದ್ದ ಕಾಳಜಿ ಈಗ ನನ್ನ ಕಡೆ ಇಲ್ಲ ಎನ್ನುವುದು ಹಳ್ಳಿಹಕ್ಕಿಯ ಕೊರಗಿಗೆ ಕಾರಣ ಎನ್ನಲಾಗಿದೆ.

ಇದು ಚಿತ್ರದುರ್ಗದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ಮತ್ತೊಮ್ಮೆ ನಾನು ಒಂಟಿಯಾದೆ. ಜೊತೆಗಿದ್ದ ಸ್ನೇಹಿತರೆಲ್ಲರೂ ಕೈಬಿಟ್ಟರು ಎನ್ನುವ ಮೂಲಕ ಮಿತ್ರಮಂಡಳಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಇದಕ್ಕೆಲ್ಲಾ ಮುಖ್ಯ ಕಾರಣ ಅಧಿಕಾರ. ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿದ್ದಾಗ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದ ಹೆಚ್.ವಿಶ್ವನಾಥ್, ಬಿಜೆಪಿಗೆ ಬಂದರೂ ಅದೃಷ್ಟ ಕೈಕೊಟ್ಟಿದೆ. ಹೀಗಾಗಿ ತಮ್ಮ ಅಳಲನ್ನು ತೋಡಿಕೊಳ್ಳುತ್ತಿರುವ ವಿಶ್ವನಾಥ್, ಜೊತೆಗಿದ್ದ ಸ್ನೇಹಿತರೆಲ್ಲರೂ ಬಿಟ್ಟು ಹೋಗಿ ಸಚಿವರಾದರು. ಗಟ್ಟಿಧ್ವನಿಯಲ್ಲಿ ಮಾತನಾಡಿ ಒಬ್ಬಂಟಿಯಾದೆ. ಆದರೆ, ರಾಜ್ಯದ ಜನರು ನನ್ನ ಜೊತೆಗಿದ್ದಾರೆ ಎನ್ನುವ ಮೂಲಕ ತಮ್ಮ ಭುಜವನ್ನು ತಾವೇ ತಟ್ಟಿಕೊಂಡಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮುಂಬೈಗೆ ತೆರಳಿದ 17 ಜನರ ತಂಡವನ್ನು ನಾನು ಮುನ್ನಡೆಸಿದೆ. ಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಬಿಜೆಪಿಗೆ ಬಂದಿಲ್ಲ. ಸಚಿವ ಸ್ಥಾನವನ್ನು ಮತ್ತೆ ಕೇಳುವುದಿಲ್ಲ. ರಾಜ್ಯದಲ್ಲಿ ಗಟ್ಟಿ ಧ್ವನಿ ಕೇಳಿಸುತ್ತದೆ ಹೊರತು ಹೇಡಿ ಧ್ವನಿಯಲ ಎನ್ನುವ ಮೂಲಕ ತಮ್ಮದೇ ಮಿತ್ರಮಂಡಳಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








