ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಪ್ರಥಮ ಕಂಬಳ ಸ್ಪರ್ಧೆಗೆ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.
ನ. 25 ಹಾಗೂ 26 ರಂದು ಬೆಂಗಳೂರು ಕಂಬಳ (Kambala) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಸಲು ಸಿದ್ಧತೆ ನಡೆದಿದೆ. 151 ಮೀಟರ್ ಉದ್ದದ ಟ್ರ್ಯಾಕ್ ನಿರ್ಮಾಣದ ತಯಾರಿ ಕೂಡ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಯಾರಿಯನ್ನು ಸ್ಪೀಕರ್ ಯು.ಟಿ.ಖಾದರ್, ಪುತ್ತೂರು ಶಾಸಕ ಅಶೋಕ್ ರೈ, ಗುಣರಂಜನ್ ಶೆಟ್ಟಿ, ಗುರು ಕಿರಣ್, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರ್ ರೈ ಸಾಥ್ ಪರಿಶೀಲನೆ ನಡೆಸಿದ್ದಾರೆ.
ಕಂಬಳಕ್ಕೆ 150 ಜೋಡಿ ಕೋಣಗಳು ಭಾಗವಹಿಸಲಿವೆ ಎನ್ನಲಾಗಿದ್ದು ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿದೆ. ಕಂಬಳಕ್ಕೆ ಬೇಕಾದ ಕೆಸರು ಗದ್ದೆ ರೆಡಿ ಮಾಡಲು ಮಣ್ಣು, ನೀರಿನ ಟೆಸ್ಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದೆ.