ಬೆಂಗಳೂರು: ತಿರುಪತಿ ಲಡ್ಡು (Tirupati Laddu) ದಲ್ಲಿ ಪ್ರಾಣಿಗಳ ಕೊಬ್ಬು ಇರುವ ವಿಷಯ ಬಹಿರಂಗವಾಗುತ್ತಿದ್ದಂತೆ ರಾಜ್ಯದಲ್ಲಿಯೂ ಈ ಕುರಿತು ಚರ್ಚೆ ಶುರುವಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ನಂದಿನಿ ಮೊರೆ ಹೋಗಿದೆ.
ಕರ್ನಾಟಕ ಸರ್ಕಾರ (Karnataka Government) ರಾಜ್ಯದ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ (Nandini Ghee) ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ನೀಡಿದೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ (Muzrai Temple) ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ, ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.