ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತನ ಮಗ ಶುಬ್ಬಿ ಗೆ ಆಲ್ ದಿ ಬೆಸ್ಟ್..!

Mahesh M Dhandu by Mahesh M Dhandu
December 25, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ರೈತನ ಮಗ ಶುಬ್ಬಿ ಗೆ ಆಲ್ ದಿ ಬೆಸ್ಟ್..!

ಶುಬ್ಮನ್ ಗಿಲ್… ವಯಸ್ಸು 21.. ಜೆರ್ಸಿ ನಂಬರ್ 77.. ಪಂಜಾಬ್ ನ ಉದಯೊನ್ಮುಖ ಕ್ರಿಕೆಟಿಗ. 19 ವಯೋಮಿತಿ ವಿಶ್ವಕಪ್ ಟೂರ್ನಿಯ ಸ್ಟಾರ್ ಆಟಗಾರ. ಕ್ರಿಕೆಟ್ ಬುದ್ಧ ರಾಹುಲ್ ದ್ರಾವಿಡ್ ಅವರ ನೀಲಿಗಣ್ಣಿನ ಹುಡುಗ. ಕ್ರಿಕೆಟ್ ದೇವ್ರು ಸಚಿನ್ ತೆಂಡುಲ್ಕರ್ ಮತ್ತು ಲಿಟ್ಲ್ ಮಾಸ್ಟರ್ ಸುನೀಲ್ ಗವಾಸ್ಕರ್ ಅವರ ಮೆಚ್ಚುಗೆ ಗಳಿಸಿದ್ದ ತರುಣ. ಯುವರಾಜ್ ಸಿಂಗ್ ಅವರ ಪ್ರೀತಿಯ ಬ್ಯಾಟ್ಸ್ ಮೆನ್..

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಹೀಗೆ ತನ್ನ ಪ್ರತಿಭೆ ಮತ್ತು ಸಾಮರ್ಥ್ಯ ಹಾಗೂ ಜಬರ್‌ದಸ್ತ್ ಆಟದ ಮೂಲಕ ಮಿಂಚು ಹರಿಸಿದ್ದ ಶುಬ್ಮನ್ ಗಿಲ್ ಅವರಿಗೆ 2020ರ ಡಿಸೆಂಬರ್ 26 ಮರೆಯಲಾಗದ ದಿನ.

shubman-gill

ಹೌದು, ಐತಿಹಾಸಿಕ ಮೆಲ್ಬರ್ನ್ ಮೈದಾನದಲ್ಲಿ ಶುಬ್ಮನ್ ಗಿಲ್ ಅವರು ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದ ಮೂಲಕ ಗಿಲ್ ಅವರು ಟೆಸ್ಟ್ ಕ್ರಿಕೆಟ್‌ಗೆ ಮೊದಲ ಹೆಜ್ಜೆಯನ್ನಿಡುತ್ತಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್ ಗೆ 297ನೇ ಆಟಗಾರನಾಗಿ ಶುಬ್ಮನ್ ಗಿಲ್ ಕಾಲಿಡುತ್ತಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ವಿವಿಧ ವಯೋಮಿತಿ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚು ಹರಿಸುತ್ತಿರುವ ಶುಬ್ಮನ್ ಗಿಲ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 19 ವಯೋಮಿತಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಗಿಲ್ ಸರಣಿ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದುಕೊಂಡಿದ್ದರು.

11ರ ಹರೆಯದಲ್ಲೇ ಗಿಲ್ ಅವರು ಪಂಜಾಬ್ ಜಿಲ್ಲಾ 16 ವಯೋಮಿತಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಆಡಿರುವ ಐದು ಪಂದ್ಯಗಳಲ್ಲಿ 339 ರನ್ ದಾಖಲಿಸಿದ್ದರು.

2014ರಲ್ಲಿ ಪಂಜಾಬ್ ರಾಜ್ಯ ಮಟ್ಟದ ವಿಜಯ ಮರ್ಚೆಂಟ್ ಟೂರ್ನಿಯಲ್ಲಿ ದ್ವಿಶತಕ ಸಿಡಿಸಿ ಮಿಂಚು ಹರಿಸಿದ್ದರು. ಜಿಲ್ಲಾ ಮಟ್ಟದ ಪಂದ್ಯವೊಂದರಲ್ಲಿ 587 ರನ್ ಪೇರಿಸಿ ವಿಶ್ವ ದಾಖಲೆ ಕೂಡ ನಿರ್ಮಿಸಿದ್ದರು. 2013-14ನೆ ಸಾಲಿನ ಎಮ್.ಎ. ಚಿದಂಬರಮ್ ಟ್ರೋಫಿಯನ್ನು ಕೂಡ ತನ್ನದಾಗಿಸಿಕೊಂಡಿದ್ದರು.

19 ವಯೋಮಿತಿ ವಿಶ್ವ ಕ್ರಿಕೆಟ್ ಟೂರ್ನಿಯ ಉಪನಾಯಕನಾಗಿದ್ದ ಗಿಲ್ ಅವರು 418 ರನ್ ಪೇರಿಸುವ ಮೂಲಕ ಟೀಮ್ ಇಂಡಿಯಾದ ಭವಿಷ್ಯದ ಆಟಗಾರ ಅಂತನೇ ಬಿಂಬಿತರಾಗಿದ್ದರು.

2017-18ರಲ್ಲಿ ರಣಜಿ ಟೂರ್ನಿಗೆ ಎಂಟ್ರಿಯಾದ ಶುಬ್ಮನ್ ಗಿಲ್ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಗಮನ ಸೆಳೆದಿದ್ದರು. 2019ರಲ್ಲಿ ನ್ಯೂಜಿಲೆಂಡ್ ವಿರುದ್ಧ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಅದೇ ರೀತಿ ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದು ಆಯ್ಕೆಗಾರರ ಗಮನ ಕೂಡ ಸೆಳೆದಿದ್ದರು.

shubman-gill

ಪಂಜಾಬ್‌ನ ರೈತನ ಮಗನಾಗಿರುವ ಗಿಲ್ ಅವರನ್ನು ಪ್ರೀತಿಯಿಂದ ಸುಬ್ಬು, ಸುಬ್ಬಿ ಅಂತ ಕರೆಯುತ್ತಾರೆ. ಇದೀಗ ಶುಬ್ಮನ್ ಗಿಲ್ ತನ್ನ ಗೆಳೆಯ ಹಾಗೂ 19 ವಯೋಮಿತಿ ತಂಡದ ನಾಯಕ ಪೃಥ್ವಿ ಶಾ ಅವರ ಸ್ಥಾನವನ್ನು ಅಕ್ರಮಿಸಿಕೊಂಡಿದ್ದಾರೆ. ಗಿಲ್ ಗಿಂತ ಮೊದಲೇ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಪೃಥ್ವಿ ಶಾ ಅವರು ನಿರೀಕ್ಷಿತಮಟ್ಟದ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಎರಡನೇ ಟೆಸ್ಟ್ ನಲ್ಲಿ ಗಿಲ್ ಅವರು ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಗಿಲ್ ಅವರು ಯಾವ ಕ್ರಮಾಂಕದಲ್ಲಿ ಆಡ್ತಾರೋ ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ರಾಹುಲ್ ಕೆಳ ಕ್ರಮಾಂಕದಲ್ಲಿ ಆಡಿದ್ರೆ ಶುಬ್ಮನ್ ಗಿಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇಲ್ಲದಿದ್ರೆ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.

ಕ್ರಿಕೆಟ್ ತಾಂತ್ರಿಕತೆಗಳನ್ನು ಮೈಗೂಡಿಸಿಕೊಂಡಿರುವ ಗಿಲ್ ಅದ್ಭುತವಾಗಿ ಬ್ಯಾಟ್ ಬೀಸುತ್ತಾರೆ. ಇದೀಗ ತನ್ನ ಮೊದಲ ಅಗ್ನಿ ಪರೀಕ್ಷೆಯಲ್ಲಿ ಗಿಲ್ ಯಾವ ರೀತಿ ಆಡ್ತಾರೋ ಅನ್ನೋದು ಕುತೂಹಲ ಮೂಡಿಸಿದೆ.

ಏನೇ ಆಗ್ಲಿ, ಸದ್ಯದ ಯುವ ಪ್ರತಿಭೆಗಳಲ್ಲಿ ಶುಬ್ಮನ್ ಗಿಲ್ ಒಂದು ಹೆಜ್ಜೆ ಮುಂದಿದ್ದಾರೆ. ಸಾಕಷ್ಟು ಭರವಸೆ ಮೂಡಿಸಿರುವ ಕಾರಣ ಗಿಲ್ ಅವರನ್ನು ಭವಿಷ್ಯದ ಆಟಗಾರ ಅಂತನೇ ಹೇಳಲಾಗುತ್ತಿದೆ. ಆಲ್ ದಿ ಬೆಸ್ಟ್ ಸುಬ್ಬಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CricketindiaShubman Gill
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram