ಲಾ, ಬಿಎ ಪಾಸ ಮಾಡಿದವರೆಲ್ಲಾ ಆರ್ಥಿಕ ತಜ್ಞರಾಗುತ್ತಾರೆ : ಪ್ರತಾಪ್ ಸಿಂಹ Saaksha Tv
ಮೈಸೂರು: ಲಾ ಪಾಸ್ ಮಾಡಿದವರೆಲ್ಲಾ ಬಿಎ ಪಾಸ್ ಮಾಡಿದವರೆಲ್ಲಾ ಆರ್ಥಿಕ ತಜ್ಞರಾಗುತ್ತಾರೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಜೆಟ್ ಬಂದರೆ ಸಾಕು ಲಾ ಪಾಸ್ ಮಾಡಿದವರು ಬಿಎ ಪಾಸ್ ಮಾಡಿರುವವರೆಲ್ಲಾ ಆರ್ಥಿಕ ತಜ್ಞರಾಗುತ್ತಾರೆ ಸಿದ್ದರಾಮಯ್ಯ ಅವರಿಗೆ ಅರ್ಥ ವ್ಯವಸ್ಥೆಯೇ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾಲಳೆದರು.
ಅಲ್ಲದೇ ಕೇಂದ್ರ ಸರ್ಕಾರ ರಾಜ್ಯ, ಜಿಲ್ಲೆಯನ್ನು ಮೆಚ್ಚಿಸಲು ಬಜೆಟ್ ಅನ್ನು ಮಂಡನೆ ಮಾಡಿಲ್ಲ. ಇಡೀ ದೇಶವನ್ನು ಮೆಚ್ಚಿಸುವ ಸಲುವಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಇಡೀ ದೇಶದ ಸಮಗ್ರದ ಅಭಿವೃದ್ದಿಯ ಸಲುವಾಗಿ ಬಜೆಟ್ ಮಂಡನೆ ಮಾಡಲಾಗಿದೆ ಅಂತ ತಿಳಿಸಿದರು.
ಸಿದ್ದರಾಮಯ್ಯ ಅವರು 13 ಬಜೆಟ್ ಮಂಡಿಸಿದ್ದಾರೆ ಅಷ್ಟೇ. ಅವರಿಗೆ ಆರ್ಥಿಕ ವ್ಯವಸ್ಥೆ ಸ್ಪಷ್ಟವಾಗಿ ಅರ್ಥವಾಗಿಲ್ಲ. ಸಿದ್ದರಾಮಯ್ಯ ಅವರಿಗೆ ಅರ್ಥ ವ್ಯವಸ್ಥೆಯೇ ಗೊತ್ತಿಲ್ಲ ಎಂದು ಹಿಯಾಳಿಸಿದರು.