ಚಿಕ್ಕೋಡಿ (ಬೆಳಗಾವಿ): ಕನ್ನಡ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ (63) (Sri Allamaprabhu Swamiji) ಲಿಂಗೈಕ್ಯರಾಗಿದ್ದಾರೆ.
ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ಕಿಡ್ನಿ ಸಂಬಂಧಿತಿ ಕಾಯಿಲೆಯಿಂದ ಹಲವಾರು ದಿನಗಳಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಭಕ್ತ ವೃಂದ ಶೋಕ ಸಾಗರದಲ್ಲಿ ಮುಳುಗಿದೆ.