ನೆಲಮಂಗಲ: ಪಾಪಿ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.
17 ವರ್ಷದ ಅಪ್ರಾಪ್ತ ಪುತ್ರಿ ಮೇಲೆಯೇ ತಂದೆ (Father) ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯು ಬೆಂಗಳೂರಿನ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು ಎನ್ನಲಾಗಿದೆ. ಆದರೆ, ಅವರು, ದಸರಾ ರಜೆ ಹಿನ್ನೆಲೆ ಊರಿಗೆ ಬಂದಿದ್ದಳು. ಈ ಸಂದರ್ಭದಲ್ಲಿ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತಂದೆಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗಿದೆ.