ಬೆಂಗಳೂರು :ಡ್ರಗ್ಸ್ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ನಾನು ಅಲ್ಪಸಂಖ್ಯಾತನಾಗಿದ್ದೇನೆ. ನಾನು ಬೆಳೆಯುತ್ತಿರುವುದನ್ನು ನೋಡಿ ನನ್ನನ್ನು ತುಳಿಯಲು ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬರುತ್ತಿರುವ ಆರೋಪ ರಾಜಕೀಯ ಪ್ರೇರಿತವಾಗಿದೆ. ಫಾಜಿಲ್ ನಾಲ್ಕು ವರ್ಷದ ಹಿಂದೆ ಪರಿಚಯವಾಗಿದ್ದ. ಆದರೆ ಈಗ ನಾನು ಆತನ ಸಂಪರ್ಕದಲ್ಲಿ ಇಲ್ಲ. ಯಾರೋ ಬರುತ್ತಿರುತ್ತಾರೋ ಅವರೆಲ್ಲಾ ಆಪ್ತರು ಅಂತಾ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಈಗ ಇಲ್ಲಿ ಸರ್ಕಾರ ಯಾವುದಿದೆ ? ಕಾಂಗ್ರೆಸ್ ಸರ್ಕಾರ ಇದೆಯಾ ? ಬಿಜೆಪಿ ಸರ್ಕಾರ ಇದ್ಯಾ? ಸಂಜನಾ ಎಲ್ಲಿದ್ದಾರೆ? ಪೊಲೀಸ್ ಕಸ್ಟಡಿಯಲ್ಲಿದ್ದಾರೆ ತಾನೇ. ತನಿಖೆ ಮಾಡಲಿ. ನಾನು ಪ್ರಕರಣದಲ್ಲಿ ಇದ್ದದ್ದು ಸಾಬೀತಾದರೆ ರಾಜ್ಯದಲ್ಲಿರುವ ನನ್ನ ಆಸ್ತಿ ಸರ್ಕಾರ ಕ್ಕೆ ಕೊಟ್ಟು ಬಿಡುತ್ತೇನೆ ಎಂದು ಪುನರುಚ್ಚಿಸಿದ ಜಮೀರ್, ಸಂಜನಾರನ್ನ ನಾನು ಶ್ರೀಲಂಕಾ ಯಾಕೆ ಇಲ್ಲೇ ನೋಡಿಲ್ಲ ಎಂದಿದ್ದಾರೆ.
https://www.youtube.com/watch?v=BiO5BzHk1Oc