ಮೈಸೂರು: ಮೇಲಧಿಕಾರಿಯ ಕಿರುಕುಳ ತಾಳಲಾರದೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಉಪ ತಹಸೀಲ್ದಾರ್ (Deputy Tehsildar) ಶಿವಕುಮಾರ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಶಿವಕುಮಾರ್ ಮಾನಸಿಕ ಹಿಂಸೆ ನೀಡುವುದನ್ನು ತಾಳಲಾರದೆ ಪರಮೇಶ್ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ಪರಮೇಶ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಕಾರಣ ಎಂದು ಪರಮೇಶ್ ಡೆತ್ ನೋಟ್ನಲ್ಲಿ ಬರೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹುಲ್ಲಹಳ್ಳಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.