ಬೆಂಗಳೂರು: ಕೆಇಎ (KEA) ಪರೀಕ್ಷೆ ಬರೆಯಲು ಹಿಜಬ್ (Hijab) ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ.
ಇದೇ ತಿಂಗಳು 18 ಹಾಗೂ 19ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ನಿಗಮ-ಮಂಡಳಿಗಳ ಪರೀಕ್ಷೆಗೆ ಅಭ್ಯರ್ಥಿಗಳು ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.
ಮೊದಲ ಹಂತದ ಪರೀಕ್ಷೆ ವೇಳೆಯೂ ಹಿಜಬ್ ಅವಕಾಶ ಕೊಟ್ಟಿದ್ದ ಕೆಇಎ ನಿರ್ಧಾರಕ್ಕೆ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದವು. ಈಗ ಎರಡನೇ ಹಂತದ ಪರೀಕ್ಷೆಗೆ ಕೂಡ ಅನುಮತಿ ನೀಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಸಂಬಂಧ ಕೆಇಎ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. ಹಿಜಬ್ ಧರಿಸುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.