ಟಾಲಿವುಡ್ ನ ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕೊರೊನಾ ಪಾಸಿಟಿವ್..!
ಹೈದ್ರಾಬಾದ್ : ಟಾಲಿವುಡ್ ನ ಸ್ಟೈಲೀಶ್ ಸ್ಟಾರ್ ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ನಟನೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
‘ನಾನು ನನ್ನ ಮನೆಯಲ್ಲೇ ಐಸೋಲೇಷನ್ ಆಗಿದ್ದೇನೆ. ಅಲ್ಲದೆ ನಾನು ಚೆನ್ನಾಗಿದ್ದೇನೆ. ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತಿದ್ದೇನೆ. ನನ್ನ ಬಗ್ಗೆ ಹೆಚ್ಚು ಚಿಂತಿಸಬೇಡಿ’ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅಲ್ಲು ಅರ್ಜುನ್ ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾಗ್ತಿದ್ದಂತೆ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದು, ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದ್ರೆ ಅಲ್ಲು ಅರ್ಜುನ್ ಅವರ ನಟನೆಯ ಬಹುನಿರೀಕ್ಷೆಯ ‘ಪುಷ್ಪ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಚಿತ್ರವು ಇದೇ ಆಗಸ್ಟ್ 13 ಕ್ಕೆ ತೆರೆ ಕಾಣಲಿದೆ. ಆದ್ರೆ ಕೊರೊನಾ ಹಾವಳಿ ಹೀಗೆ ಮುಂದುವರೆದರೆ ನಿಗದಿತ ಸಮಯಕ್ಕೆ ಸಿನಿಮಾ ಬಿಡುಗಡೆಯಾಗುವುದು ಡೌಟ್.. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೋಡಿಯಾಗಿ ಕನ್ನಡದ ‘ಕಿರಿಕ್ ರಾಣಿ’ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ.