ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಈ ಚಿತ್ರ ಕೂಡ ದೊಡ್ಡ ಬಜೆಟ್ ನಲ್ಲಿ ಮೂಡಿ ಬರುತ್ತಿದೆ. ಆಗಷ್ಟ್ 15ರಂದು ಚಿತ್ರ ಬಿಡುಗಡೆಯಾಗಲಿದ್ದು, ಏಪ್ರಿಲ್ 8ರಂದು ಅಲ್ಲು ಅರ್ಜುನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಚಿತ್ರ ತಂಡವು ಟೀಸರ್ ಬಿಡುಗಡೆ ಮಾಡಿದೆ. ಈ ಟೀಸರ್ ಗಾಗಿ ಅಲ್ಲು ಅರ್ಜುನ್ ಬರೋಬ್ಬರಿ 50 ಟೇಕ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಸಾಮಾನ್ಯವಾಗಿ ಹೊಸ ಕಲಾವಿದರು ಹೆಚ್ಚು ಟೇಕ್ ತೆಗೆದುಕೊಳ್ಳುತ್ತಾರೆ. ಆದರೆ ಅಲ್ಲು ಅರ್ಜುನ್ ಕೂಡ ಟಾಲಿವುಡ್ನಲ್ಲಿ ಅನುಭವಿ ನಟ. ಆದರೂ ಬರೋಬ್ಬರಿ 51 ಟೇಕ್ ತೆಗೆದುಕೊಂಡಿದ್ದರು. ಈ ಕುರಿತು ಹಲವು ಮಾಧ್ಯಮಗಳು ವರದಿ ಮಾಡಿವೆ.
ಜನರ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಇರಬೇಕು. ನಟನೆ ಕೂಡ ಇರಬೇಕು. ಹೀಗಾಗಿಯೇ ಎಲ್ಲವೂ ಪರ್ಫೆಕ್ಟ್ ಆಗಿರಬೇಕು. ಟೀಸರ್ನಲ್ಲಿ ಅಲ್ಲು ಅರ್ಜುನ್ ಅವರು ಸ್ತ್ರೀ ವೇಷ ಧರಿಸಿದ್ದಾರೆ. ಮೈ ತುಂಬ ಆಭರಣಗಳನ್ನು ಹಾಕಿಕೊಂಡು ಅವರು ಫೈಟ್ ಮಾಡಿದ್ದಾರೆ. ಜಾತ್ರೆಯ ಈ ಸನ್ನಿವೇಶ ಇದೆ. ‘ಪುಷ್ಪ 2’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆಗಸ್ಟ್ 15ರಂದು ವಿಶ್ವಾದ್ಯಂತ ಈ ಸಿನಿಮಾವನ್ನು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಕೂಡ ಅಲ್ಲುಗೆ ಜೋಡಿಯಾಗಿ ರಶ್ಮಿಕಾ ನಟಿಸಿದ್ದಾರೆ. ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿದಂತೆ ಹಲವರು ನಟಿಸಿದ್ದಾರೆ. ಈಗಾಗಲೇ ಚಿತ್ರದ ಪ್ರಚಾರ ವಿದೇಶದಲ್ಲಿ ಕೂಡ ನಡೆಯುತ್ತಿದೆ.