ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ2 ಚಿತ್ರಹ ಹಕ್ಕನ್ನು 200 ಕೋಟಿ ರೂ.ಗೆ ಖರೀದಿಸಲಾಗಿದೆ ಎಂದು ತಿಳಿದು ಬಂದಿದೆ. ದಕ್ಷಿಣದ ಸಿನಿಮಾಗಳಿಗೆ ಹಿಂದಿಯಲ್ಲಿ (Bollywood) ಕೂಡ ಈಗ ಬೇಡಿಕೆ ಹೆಚ್ಚಾಗುತ್ತಿದೆ.
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಹಕ್ಕನ್ನು ಬರೋಬ್ಬರಿ 200 ಕೋಟಿ ರೂ. ಗೆ ಅನಿಲ್ ತಡಾನಿ ಖರೀದಿಸಿದ್ದಾರ ಎಂದು ತಿಳಿದು ಬಂದಿದೆ. ಆದರೆ, ಅಧಿಕೃತವಾಗಿ ಯಾರೂ ಹೇಳಿಲ್ಲ.
ಈಗಾಗಲೇ ಚಿತ್ರದ ಫಸ್ಟ್ ಲುಕ್, ಟೀಸರ್ ಬಿಡುಗಡೆಯಾಗಿವೆ. ಅಲ್ಲದೇ, ಮೇ 1 ರಂದು ಚಿತ್ರದ ಮೊದಲ ಲಿರಿಕಲ್ ಸಾಂಗ್ (Lyrical Song) ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಚಿತ್ರದ ಡಿಜಿಟೆಲ್ ರೈಟ್ಸ್ (Digital Rights) ಬರೋಬ್ಬರಿ 275 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ. ಇಷ್ಟೊಂದು ಮೊತ್ತದ ಹಣವನ್ನು ಕೊಟ್ಟು ಇದೇ ಮೊದಲ ಬಾರಿಗೆ ಡಿಜಿಟೆಲ್ ಹಕ್ಕುಗಳನ್ನು ಖರೀದಿಸಲಾಗಿದೆ ಎನ್ನುವುದು ವಿಶೇಷ.
ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ. ಈ ಚಿತ್ರ ಸಾವಿರಾರು ಕೋಟಿ ಗಳಿಸಬಹುದು ಎಂದು ಅಂದಾಜಿಸಲಾಗಿದೆ. ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.