ತೆಲುಗಿನ ಸ್ಟೈಲೀಷ್ ಸ್ಟಾರ್ ಅಲ್ಲು ಅರ್ಜುನ್ ಅವರು ಕಾಡಿನಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ಅಲ್ಲು ಅರ್ಜುನ್ ಅವರನ್ನು ನೋಡಲು ಮುಗಿಬಿದ್ದಿದ್ದ ಸಾವಿರಾರು ಅಭಿಮಾನಿಗಳು ಅಲ್ಲು ರಗಡ್ ಲುಕ್ ಗೆ ಫಿದಾ ಆಗಿದ್ದಾರೆ. ಲಾಕ್ ಡೌನ್ ಬಳಿಕ ಅಲ್ಲು ಅರ್ಜುನ್ ಕುಟುಂಬದ ಜೊತೆ ಮೊದಲ ಬಾರಿಗೆ ಮನೆಯಿಂದ ಹೊರಬಂದಿದ್ದಾರೆ. ತೆಲಂಗಾಣದ ಅಡಿಲಾಬಾದ್ ಕಾಡಿಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾರೆ.
ಇನ್ನೂ ಅಲ್ಲು ಅರ್ಜುನ್ ಎಂಟ್ರಿ ಕೊಡುತ್ತಿದ್ದಂತೆ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಾರೆ. ಇನ್ನೂ ಅಭಿಮಾನಿಗಳ ಗುಂಪು ಕಂಡ ಅಲ್ಲು ಕಾರಿನಿಂದ ಹೊರಗಿಳಿಯದೇ ಕಾರಿನ ಒಳಗೆಯೇ ಕುಳಿತು ಅಭಿಮಾನಿಗಳ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಕಾರಿನನಿಂದ ಇಳಿದು ಅಭಿಮಾನಿಗಳತ್ತ ಕೈ ಬೀಸಿ ಹೊರಟಿದ್ದಾರೆ. ಇನ್ನೂ ಅಲ್ಲು ಅರ್ಜುನ್ ಅವರ ಈ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.








