ಅಮರಿಂದರ್ ಸಿಂಗ್ ರಾಜೀನಾಮೆ : ಡಿಕೆಶಿ, ಸಿದ್ದರಾಮಯ್ಯ ಮೌನವೇಕೆ ಎಂದ ಬಿಜೆಪಿ
ಬೆಂಗಳೂರು : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಕಾಂಗ್ರೆಸ್ ನಾಯಕರನ್ನು ಕುಟುಕಿದೆ.
ಬಿಜೆಪಿ ಟ್ವೀಟ್ ನಲ್ಲಿ.. ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ಅವರ ರಾಜಿನಾಮೆಯ ಹಿಂದೆ ಕಾಂಗ್ರೆಸ್ ಕುತಂತ್ರ ಅಡಗಿದೆ.
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಹಾಗೂ ಯುವರಾಜನ ಒತ್ತಡದಿಂದಾಗಿ ಅಮರಿಂದರ್ ಸಿಂಗ್ ರಾಜಿನಾಮೆ ನೀಡಿದ್ದಾರೆ.
ಬಿಎಸ್‍ವೈ ಅವರ ರಾಜಿನಾಮೆಯ ಕುರಿತು ಮೊಸಳೆ ಕಣ್ಣೀರು ಸುರಿಸಿದ ಡಿಕೆಶಿ, ಸಿದ್ದರಾಮಯ್ಯ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದೆ.
ಇನ್ನು ಇಂದು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅವಮಾನಕ್ಕೆ ಒಳಗಾಗುತ್ತೇನೆ ಎಂದನಿಸಿದೆ.
ಹೀಗಾಗಿ ನಾನು ರಾಜೀನಾಮೆ ನೀಡಿದೆ ಎಂದು ಹೇಳಿದ್ದಾರೆ. ಇದು ಮೂರನೇ ಬಾರಿ ನಡೆಯುತ್ತಿದೆ.
ನಾನು ಅವಮಾನಕ್ಕೆ ಒಳಗಾಗಿದ್ದೇನೆ. ಅವರು ಯಾರನ್ನು ನಂಬಬಲ್ಲರೋ ಅವರನ್ನು ಮುಖ್ಯಮಂತ್ರಿ ಮಾಡಬಹುದು.
ಕಾಂಗ್ರೆಸ್ ಅಧ್ಯಕ್ಷೆ ಏನು ನಿರ್ಧಾರ ಮಾಡುತ್ತಾರೋ ಅದು ಸರಿ. ನಾನು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದೇನೆ ಎಂದಿದ್ದಾರೆ.