ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ

ಬೆಂಗಳೂರು : ಕಂಠೀರವ ಸ್ಟುಡಿಯೋ ಆವರಣದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ಸಭೆ ಮಾಡಲಾಯಿತು. ಈ ಸಭೆಯಲ್ಲಿ ಸಂಸದೆ ಸುಮಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಅಭಿಷೇಕ್, ಹಿರಿಯ ಹಾಸ್ಯ ನಟ ದೊಡ್ಡಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೆ ಸುಮಲತಾ, ಅಂಬರೀಶ್ ಅವರ ಸ್ಮಾರಕಕ್ಕೆ 1 ಎಕರೆ 34 ಗುಂಟೆ ಜಮೀನು ಮಂಜೂರು ಆಗಿದೆ. ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಇರುವ ಜಾಗದಲ್ಲೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಸರ್ಕಾರದಿಂದ 5 ಕೋಟಿ ರೂ. ಬಜೆಟ್ ನಲ್ಲಿ ನಿಗದಿ ಮಾಡುವ ಭರವಸೆವನ್ನು ಕೊಟ್ಟಿದ್ದು, ಆದಷ್ಟು ಬೇಗ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This