Ambatanaya Mudradi : ಯಕ್ಷಗಾನ ಕಲಾವಿದ, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ವಿಧಿವಶ…
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಯಕ್ಷಗಾನ ಕಲಾವಿದ, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅವರು ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿಯವರಾದ ಅಂಬಾತನಯ ಮುದ್ರಾಡಿ (88) ಅವರು ಮಂಗಳವಾರ ಮುಂಜಾನೆ ಅಗಲಿದ್ದಾರೆ.
ಇವರು ಶಿಕ್ಷಕರಾಗಿದ್ದುಕೊಂಡು ಯಕ್ಷಗಾನ ನಾಟಕ, ಸಾಹಿತ್ಯ ಹೀಗೆ ಹಲವು ಆಯಾಮಗಳಲ್ಲಿ ಖ್ಯಾತರಾಗಿದ್ದರು. ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ್ದಾರೆ.
ಕಳೆದ ವಾರ ಉಡುಪಿಯಲ್ಲಿ ನಡೆದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು, ಅವರ ಕೊನೆಯ ಕಾರ್ಯಕ್ರಮವಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿಗಳು ಸೇರಿದಂತೆ ಹಲವು ಗೌರವಗಳು ಇವರಿಗೆ ಸಂದಿವೆ.
ಅಂಬಾತನಯ ಮುದ್ರಾಡಿ ಅವರು ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ.
Ambatanaya Mudradi: Yakshagana artist, veteran literature Ambatanaya Mudradi passed away…