ಮೈಸೂರು: ಅಂಬೇಡ್ಕರ್ ನಾಮಫಲಕ (Ambedkar Nameplate) ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮನೆಗಳ ಮೇಲೆ ಕೂಡ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದಾರೆ. ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಹೀಗಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿವೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ತೆರಳಿದ್ದಾರೆ.