ಮಂಗಳೂರು: ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಸಿಸಿಬಿ (Mangaluru CCB) ಪೊಲೀಸರು ಮೂವರನ್ನು ಬಂಧಿಸಿ, 1.57 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪಂಪ್ವೆಲ್ ಹತ್ತಿರ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಪ್ಯಾರೇಜಾನ್ ಅಲಿಯಾಸ್ ಸೇಟು, ಬದ್ರುದ್ದೀನ್ ಅಲಿಯಾಸ್ ಬದ್ರು, ತಮಿಳುನಾಡಿನ ಆರ್.ರಾಜೇಶ್ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.5 ಕೆಜಿ ಅಂಬರ್ಗ್ರೀಸ್ ವಶಕ್ಕೆ ಪಡೆದಿದ್ದಾರೆ.
ತಿಮಿಂಗಲ ವಾಂತಿಗೆ ಅಂಬರ್ ಗ್ರಿಸ್ ಅಂತ ಹೇಳುತ್ತಾರೆ. ಇದಕ್ಕೆ ದೇಶದಲ್ಲಿ ಭಾರೀ ಬೇಡಿಕೆ ಇದೆ. 1 ಕೆ.ಜಿ. ತಿಮಿಂಗಿಲ ವಾಂತಿ ಕೋಟಿ ರೂ.ಗಿಂತ ಅಧಿಕ ಬೆಲೆ ಇದೆ.