ಅಂಬಿ ನೆನಪು ಶಾಶ್ವತ : ಸುಮಲತಾ ಅಂಬರೀಶ್
ಬೆಂಗಳೂರು : ಇಂದು ಸ್ಯಾಂಡಲ್ ವುಡ್ ನ ರೆಬೆಲ್ ಸ್ಟಾರ್ ಅಂಬರೀಷ್ ಅವರ 69ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಂಬಿ ಸ್ಮಾರಕಕ್ಕೆ ಸುಮಲತಾ ಅಂಬರೀಶ್ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಅಂಬಿ ನೆನಪು ಶಾಶ್ವತ. ಅಂಬರೀಶ್ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಸಂಭ್ರಮದಿಂದ ಆಚರಿಸುತ್ತಿದ್ದರು.
ಆದರೆ ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ ಈ ವರ್ಷ ಕೊರೋನಾ ಕಾರಣದಿಂದ ಸಂಭ್ರಮದ ಆಚರಣೆ ಇಲ್ಲ.
ಅವರ ಜೀವನದಿಂದ ಸ್ಫೂರ್ತಿ ಪಡೆದು ಕೆಲಸ ಮಾಡುತ್ತಿದ್ದೇನೆ. ಇಲ್ಲಿಂದ ಈಗ ಮಂಡ್ಯಕ್ಕೆ ತೆರಳಲಿದ್ದೇನೆ. ಅಲ್ಲಿ ಐಸಿಯು ಆನ್ ವೀಲ್ಸ್ ಉದ್ಘಾಟನೆ ಹಾಗೂ ಇತರೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಚಿತ್ರರಂಗಕ್ಕೆ ಸರ್ಕಾರ ನೆರವು ನೀಡುವುದರ ಬಗ್ಗೆ ಮಾತನಾಡಿ, ಈ ಬಗ್ಗೆ ಪ್ರಯತ್ನಗಳು ನಡೀತಿವೆ.
ರಾಜ್ಯ ಸರ್ಕಾರ ಚಿತ್ರರಂಗದ ಸಮಸ್ಯೆಗೆ ಸ್ಪಂದಿಸಬೇಕು ಅನ್ನೋದೆ ನನ್ನ ಮನವಿ ಕೂಡ ಎಂದರು.