ಬೆಳಗಾವಿ :ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಆಂಬುಲೆನ್ಸ್ ಪಲ್ಟಿಯಾಗಿ, ಕೊರೊನಾ ಸೋಂಕಿತ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ 51 ವರ್ಷದ ಕೊರೊನಾ ಸೋಂಕಿತ ಹಾಗೂ ರಬಕವಿ ಮೂಲದ ಬೈಕ್ ಹಿಂಬದಿ ಸವಾರ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.
ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಕೂಡಲೇ ಗಾಯಾಳುಗಳನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕರೆತರಲಾಗಿದ್ದು, ಆಸ್ಪತ್ರೆಯಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಇನ್ನು ಘಟನೆಯಲ್ಲಿ ಇನ್ನೂ ಇಬ್ಬರಿಗೆ ಗಾಯಗಳಾಗಿದ್ದು, ಹುಕ್ಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಘಟನೆ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.