ಚಿತ್ರದುರ್ಗ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ (Ambulence) ಲಾರಿಗೆ (Lorry) ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘನಟೆ ನಡೆದಿದೆ.
ಈ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಬಳೆಕಟ್ಟೆ ಗ್ರಾಮದ ಹತ್ತಿರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತಕ್ಕೆ ಬಲಿಯಾಗಿದ್ದರು. ಹೀಗಾಗಿ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಅಂಬುಲೆನ್ಸ್‌ನಲ್ಲಿದ್ದ ಶಿವಬಸವ ಸಂಬಂಧಿ ಸರೋಜಮ್ಮ (52) ಸಾವನ್ನಪ್ಪಿದ್ದಾರೆ.
ಅಲ್ಲದೇ ಅಂಬುಲೆನ್ಸ್‌ನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








