ಬೆಂಗಳೂರು: ಆಂಬುಲೆನ್ಸ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ನೆಲಮಂಗಲದ (Nelamangala) ಬೊಮ್ಮನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಚಿತ್ರದುರ್ಗ (Chitradurga) ಆಸ್ಪತ್ರೆಯಿಂದ ಬೆಂಗಳೂರಿನ (Bengaluru) ಆಸ್ಪತ್ರೆಯೊಂದಕ್ಕೆ ಆಂಬುಲೆನ್ಸ್ ರೋಗಿಯೊಬ್ಬರನ್ನು ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಲಾರಿಗೆ ಡಿಕ್ಕಿಯಾದ (Accident) ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ್ದಾರೆ. ಅಲ್ಲದೇ, ಆಂಬುಲೆನ್ಸ್ ನಲ್ಲಿದ್ದ ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ನೆಲಮಂಗಲ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.