America-ಭಾರೀ ಮಳೆಗೆ ಗುಡ್ಡ ಕುಸಿದು ಬಸ್ ಸಿಕ್ಕಿಹಾಕಿಕೊಂಡಿದೆ. ಕೊಲಂಬಿಯಾದಲ್ಲಿ ಈ ಭೀಕರ ಅಪಘಾತ ನಡೆದಿದ್ದು. ಭೂಕುಸಿತದಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ ಸಂಪೂರ್ಣ ಕೆಸರಿನಲ್ಲಿ ಮುಚ್ಚಿಹೋಗಿದೆ ಇನ್ನೆರಡು ವಾಹನಗಳಿಗೆ ಭಾಗಶಃ ಹಾನಿಯಾಗಿದೆ.
ಈ ದುರಂತದಲ್ಲಿ ಒಟ್ಟು 34 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸತ್ತವರಲ್ಲಿ ಎಂಟು ಜನರು ಮಕ್ಕಳು ಸೇರಿದ್ದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಇಲಾಖೆ ಈ ಕುರಿತು ಪ್ರಕಟಣೆ ಹೊರಡಿಸಿದೆ.
ರಿಸಾರಾಲ್ಡಾ ಜಿಲ್ಲೆಯ ಪುಲ್ಬೊ ರಿಕೊ ಪಟ್ಟಣದಲ್ಲಿ ಭಾನುವಾರ ಸಂಜೆ ಈ ದುರಂತ ಘಟನೆ ನಡೆದಿದೆ. ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ಇಬ್ಭಾಗವಾಗಿತ್ತು.
ಈ ಸಂಧರ್ಬದಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಎರಡು ಮೀಟರ್ ಆಳದ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಬಸ್ ನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪತ್ತೆ ಮಾಡಲಾಗಿದೆ. ಮಣ್ಣಿನಡಿ ಸಿಲುಕಿದ ಕಾರಿನಲ್ಲಿದ್ದ ಆರು ಮಂದಿ ಹಾಗೂ ದ್ವಿಚಕ್ರ ವಾಹನದಲ್ಲಿದ್ದ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
A #landslide engulfed a #bus in #Colombia on Sunday afternoon, leaving at least 34 people dead and several injured.
The bus and 3 other vehicles were traveling on the highway near Pueblo Rico, #Risaralda when they were surprised by the #avalanche. #viralvdoz pic.twitter.com/ePahStfzo1
— ViralVdoz (@viralvdoz) December 6, 2022
ತಕ್ಷಣ ಮಾಹಿತಿ ಪಡೆದ ರಕ್ಷಣಾ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. 24 ಗಂಟೆಗಳ ಕಾಲ ಶ್ರಮದಾನದ ಬಳಿಕ ಮೃತದೇಹಗಳನ್ನು ಹೊರ ತೆಗೆಯಲಾಯಿತು. ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಟ್ವೀಟ್ ಮಾಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.