ಅಮೆರಿಕದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಏರಿಕೆ..!
ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೊಮ್ಮೆ ಕೊರೊನಾ ಹಾವಳಿ ಹೆಚ್ಚಾಗಿದೆ.. ಮೂರೇ ವಾರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ವೇಗವಾಗಿ ಹರಡುವ ಡೆಲ್ಟಾ ರೂಪಾಂತರ ತಳಿಯಿಂದಾಗಿ ದೈನಂದಿನ ಪ್ರಕರಣಗಳು ಮೂರು ವಾರಕ್ಕೆ ದ್ವಿಗುಣಗೊಳ್ಳುತ್ತಿವೆ. ಮೂರು ವಾರಗಳ ಹಿಂದೆ 11,300 ರಷ್ಟಿದ್ದ ದಿನದ ಸರಾಸರಿ ಕೋವಿಡ್ ಪ್ರಕರಣಗಳ ಸಂಖ್ಯೆ ಜುಲೈ 12ಕ್ಕೆ 23,600 ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿ ಅಂಶಗಳು ತಿಳಿಸಿವೆ.
ಭಾರತೀಯ ಮೂಲದ ಜಸ್ಟಿನ್ ನಾರಾಯಣ್ ಗೆ ಒಲಿದ ‘ಮಾಸ್ಟರ್ ಶೆಫ್ ಆಸ್ಟ್ರೇಲಿಯಾ’ ಪ್ರಶಸ್ತಿ
ಮೈನೆ ಮತ್ತು ದಕ್ಷಿಣ ಡಕೋತಾ ಈ ಎರಡು ರಾಜ್ಯಗಳಲ್ಲಿ ಎರಡು ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ. ಜುಲೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು ಎಂದು ನಾವು ನಿರೀಕ್ಷಿಸಿದ್ದೆವು. ಇದು ಖಂಡಿತಾ ಕಾಕತಾಳೀಯವಲ್ಲ ಎಂದು ವಾಷಿಂಗ್ಟನ್ ಯೂನಿವರ್ಸಿಟಿಯ ಸ್ಕೂಲ್ ಆಫ್ ಮೆಡಿಸಿನ್ನ ಸಾಂಕ್ರಾಮಿಕ-ರೋಗ ವಿಭಾಗದ ಸಹ ನಿರ್ದೇಶಕ ಡಾ. ಬಿಲ್ ಪೌಡರ್ಲಿ ಹೇಳಿದ್ದಾರೆ.
ಅಮೆರಿಕನ್ನರಲ್ಲಿ ಶೇಕಡಾ 55.6 ರಷ್ಟು ಜನರು ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ತಿಳಿಸಿವೆ. ಅಮೆರಿಕದ ಕೆಲ ಭಾಗಗಳಲ್ಲಿ ಲಸಿಕೆ ಅಭಿಯಾನ ಅಭೂತಪೂರ್ವವಾಗಿ ನಡೆಯುತ್ತಿದ್ದರೆ, ಮತ್ತೊಂದೆಡೆ ವೇಗವಾಗಿ ಹರಡುತ್ತಿರುವ ಡೆಲ್ಟಾ ವೈರಸ್ ರೂಪಾಂತರ ತಳಿ ಕೋವಿಡ್ ಪ್ರಕರಣಗಳನ್ನು ಹೆಚ್ಚಿಸುತ್ತಿದೆ.