ಅಮೆರಿಕಾ : ವೈದ್ಯಕೀಯ ಹಗರಣದಲ್ಲಿ ಭಾರತೀಯನಿಗೆ 20 ವರ್ಷ ಜೈಲು ಶಿಕ್ಷೆ
ಅಮೆರಿಕಾದಲ್ಲಿ ಭಾರತಯನಿಗೆ 20 ವರ್ಷಗಳ ಜೈಲು ಶಿಕ್ಷೆ ಘೋಷಿಸಲಾಗಿದೆ. ವೈದ್ಯಕೀಯ ಹಗರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ಭಾರತೀಯ ಮೂಲದ ಅಮೆರಿಕದ ವೃತ್ತಿಪರ ಶುಶ್ರೂಷಕ ತ್ರಿವಿಕ್ರಮ ರೆಡ್ಡಿ (39) ಎಂಬಾತನಿಗೆ ಅಮೆರಿಕದ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಜೊತೆಗೆ 52 ದಶಲಕ್ಷ ಡಾಲರ್ ದಂಡ ವಿಧಿಸಿದೆ. ಈತನ ವಿರುದ್ಧ ವೈದ್ಯಕೀಯ ಮತ್ತು ಖಾಸಗಿ ವಿಮೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಇದೀಗ ಈ ಆರೋಪಗಳು ಸಾಬೀತಾಗಿದ್ದು, ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಇನ್ನೂ ಈತ ಮೆಡಿಕೇರ್, ಏಟ್ನಾ, ಯುನೈಟೆಡ್ ಹೆಲ್ತ್‌ಕೇರ್, ಬ್ಲೂ ಕ್ರಾಸ್ ಬ್ಲೂ ಶೀಲ್ಡ್ ಆಫ್ ಟೆಕ್ಸಾಸ್, ಹುಮಾನಾ, ಸಿಗ್ನಾವನ್ನು ವಂಚಿಸಲು ಯತ್ನಿಸಿದ್ದ ಎನ್ನಲಾಗಿದೆ.
ವಿಮಾನ ದುರಂತದಲ್ಲಿ ಹಾಲಿವುಡ್ ನ ಖ್ಯಾತ ನಟ ಜೋ ಲಾರಾ, ಪತ್ನಿ ಸೇರಿ 7 ಮಂದಿ ಸಾವು
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.