ಇಸ್ರೇಲ್ ದಾಳಿ ಬೆಂಬಲಿಸಿದ ಅಮೆರಿಕಾ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ ಟರ್ಕಿ ಅಧ್ಯಕ್ಷ
ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸುತ್ತಿರುವ ಭೀಕರ ಬಾಂಬ್ ದಾಳಿಗಳನ್ನು ಬೆಂಬಲಿಸುತ್ತಾ ವಿಶ್ವದ ದೊಡ್ಡಣ್ಣ ಅಮೆರಿಕಾ ಇಸ್ರೇಲ್ ಪರ ನಿಂತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರುದ್ಧ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.
ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸುತ್ತಿರುವ ಭೀಕರ ಬಾಂಬ್ ದಾಳಿಗಳನ್ನು ಬೆಂಬಲಿಸುವ ಮೂಲಕ ಅಮೆರಿಕಾ ತನ್ನ ಕೈಗೆ ರಕ್ತ ಮೆತ್ತುಕೊಂಡಿದೆ ಎಂದು ಕಿಡಿಕಾರಿದ್ದಾರೆ. ನೀವು ನಿಮ್ಮ ರಕ್ತಸಿಕ್ತ ಕೈಗಳಿಂದ ಇತಿಹಾಸವನ್ನು ಬರೆಯುತ್ತಿದ್ದೀರಿ ಎಂದು ದೇಶವನ್ನುದ್ದೇಶಿಸಿ ಮಾತನಾಡಿದ ಎರ್ದೊಗಾನ್ ಬೈಡನ್ ವಿರುದ್ಧ ಗುಡುಗಿದ್ದಾರೆ. ಅಲ್ಲದೇ ಈ ಮಾತನ್ನ ಹೇಳುವ ಅನಿವಾರ್ಯತೆಯನ್ನ ನೀವೇ ತಂದುಕೊಂಡಿದ್ದೀರಾ.. ಇನ್ನೂ ಮೌನವಾಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








