ಅಮೆರಿಕಾ ಭಾರತವನ್ನು ಪ್ರೀತಿಸುತ್ತದೆ – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ಜುಲೈ 5: ಅಮೆರಿಕಾ ಭಾರತವನ್ನು ಪ್ರೀತಿಸುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಮತ್ತು ಯುನೈಟೆಡ್ ಸ್ಟೇಟ್ಸ್ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

“ಧನ್ಯವಾದಗಳು ನನ್ನ ಸ್ನೇಹಿತ. ಅಮೆರಿಕ ಭಾರತವನ್ನು ಪ್ರೀತಿಸುತ್ತದೆ!” ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ
ಶನಿವಾರ, ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ, “ಯುಎಸ್ಎ ಯ 244 ನೇ ಸ್ವಾತಂತ್ರ್ಯ ದಿನಾಚರಣೆಯಂದು ನಾನು ಟ್ರಂಪ್ ಮತ್ತು ಯುಎಸ್ಎ ಜನರನ್ನು ಅಭಿನಂದಿಸುತ್ತೇನೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ, ಈ ದಿನ ಆಚರಿಸುವ ಸ್ವಾತಂತ್ರ್ಯ, ಸಮಾನತೆ ಹಾಗೂ ಮಾನವ ಸಂಬಂಧಗಳನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದರು.








