ಕೋವಿಡ್ ಸಂಕಷ್ಟ : ಭಾರತಕ್ಕೆ ನಿರಂತರ ನೆರವು – ಅಮೆರಿಕ
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಭಾರತಕ್ಕೆ ಹಲವಾರು ದೇಶಗಳು ಬೆಂಬಲ ಸೂಚಿಸುತ್ತಿವೆ. ಈ ನಡುವೆ ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕವು ನಿರಂತರವಾಗಿ ನೆರವು ನೀಡಲಿದೆ ಎಂದು ಶ್ವೇತಭವನ ತಿಳಿಸಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಕೋವಿಡ್ ಪರಿಸ್ಥಿತಿ ನಿಭಾಯಿಸಲು ಭಾರತಕ್ಕೆ 730 ಕೋಟಿ ರೂಪಾಯಿಗಳ ಮೌಲ್ಯದ ನೆರವು ನೀಡುವುದಾಗಿ ಘೋಷಿಸಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಮ್ಮ ಪ್ರಮುಖ ಪಾಲುದಾರ ರಾಷ್ಟ್ರ ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳ ಮೇಲೆ ಕೋವಿಡ್ ಪರಿಣಾಮ ಬೀರುತ್ತಿದೆ. ಹಾಗಾಗಿ ದೇಶಗಳಿಗೆ ಯಾವ ರೀತಿಯ ನೆರವುಗಳನ್ನು ಒದಗಿಸಬೇಕು ಎಂಬುದರ ಬಗ್ಗೆ ಬೈಡನ್ ಗಂಭೀರವಾಗಿ ಚರ್ಚೆ ನಡೆಸುತ್ತಿದ್ದಾರೆ. ನಾವು ಕಠಿಣ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ನಿಂತಿದ್ಧೇವೆ. ಅಮೆರಿಕವು ನಿರಂತರವಾಗಿ ಭಾರತಕ್ಕೆ ನೆರವು ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈಗಾಗಲೇ ಇಂಟರ್‌ನ್ಯಾಷನಲ್ ಡೆವೆಲಪ್‌ಮೆಂಟ್ ಟು ಇಂಡಿಯಾ ಎಂಬ ಅಮೆರಿಕದ ಸಂಸ್ಥೆಯ ಮೂಲಕ ಭಾರತಕ್ಕೆ 7 ವಿಮಾನಗಳಲ್ಲಿ ನೆರವು ಕಳುಹಿಸಿದ್ಧೇವೆ. 7ನೇ ವಿಮಾನದಲ್ಲಿ ಆಮ್ಲಜನಕ ಉತ್ಪಾದಿಸುವ ಕಾನ್ಸನ್‌ಟ್ರೇಟರ್‌ಗಳನ್ನು ಭಾರತಕ್ಕೆ ರವಾನೆ ಮಾಡಿದ್ದೇವ ಎಂದು ಸಹ ಮಾಹಿತಿ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.