ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತೀವ್ರ ಸ್ವರೂಪಕ್ಕೆ ತಿರುಗಿದ ಅಮೆರಿಕದ ಜನಾಂಗೀಯ ಘರ್ಷಣೆ – ರಹಸ್ಯ ಅಡಗುತಾಣದಲ್ಲಿ ಬಚ್ಚಿಟ್ಟುಕೊಂಡ ಅಧ್ಯಕ್ಷ ಟ್ರಂಪ್

admin by admin
June 1, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್, ಜೂನ್ 1: ಅಮೆರಿಕದಲ್ಲಿ ಜನಾಂಗೀಯ ಘರ್ಷಣೆ ತೀವ್ರ ಸ್ವರೂಪ ಪಡೆದಿದ್ದು, ಸಾವು ನೋವು ಮತ್ತು ಲೂಟಿ ಪ್ರಕರಣಗಳು ಮುಂದುವರಿದಿದೆ. ಕಪ್ಪು ಜನಾಂಗದ ಜಾರ್ಜ್ ಫ್ಲಾಯ್ಡ್, ಬಿಳಿ ವರ್ಣೀಯ ಪೊಲೀಸ್ ಅಧಿಕಾರಿಯ ಹಿಂಸೆಯಿಂದ ಮೃತಪಟ್ಟ ಬಳಿಕ ಅಮೆರಿಕದಲ್ಲಿ ಕಪ್ಪು ವರ್ಣೀಯರು ಭುಗಿಲೆದ್ದಿದ್ದು, ಪ್ರತಿಭಟನೆ ತೀವ್ರ ಹಿಂಸಾತ್ಮಕ ಸ್ವರೂಪ ‌ಪಡೆದಿದೆ. ಅಮೆರಿಕದಲ್ಲಿ 25 ಕ್ಕೂ ಹೆಚ್ಚು ಪ್ರಮುಖ ನಗರಗಳು ಅಕ್ಷರಶಃ ‌ರಣರಂಗವಾಗಿ ಹೊತ್ತಿ ಉರಿಯುತ್ತಿದೆ.

Related posts

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026
rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

July 28, 2026

ಪ್ರತಿಭಟನೆ ತೀವ್ರ ಹಿಂಸಾರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ ಪ್ರತಿಭಟನಾಕಾರರು ಅಮೆರಿಕ ಅಧ್ಯಕ್ಷರ ಅಧಿಕೃತ ‌ನಿವಾಸ ಶ್ವೇತಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಉದ್ರಿಕ್ತ ಕಪ್ಪು ವರ್ಣೀಯರನ್ನು ಚದುರಿಸಲು ಆಶ್ರುವಾಯು ಸಿಡಿಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಆ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಭುಗಿಲೆದ್ದಿದ್ದು, ಅನೇಕರಿಗೆ ಗಾಯಗಳಾಗಿವೆ.
ವೈಟ್‍ಹೌಸ್ ಎದುರು ಪ್ರತಿಭಟನಾಕಾರರು ಹಿಂಸಾತ್ಮಕ ಪ್ರತಿಭಟನೆಯಲ್ಲಿ ತೊಡಗಿದ್ದ ಹಿನ್ನಲೆಯಲ್ಲಿ ಭದ್ರತಾ ‌ಪಡೆಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಶ್ವೇತಭವನದಲ್ಲಿರುವ ರಹಸ್ಯ ಭೂಗತ ಅಡಗುದಾಣದಲ್ಲಿ (ಅಂಡರ್‌ ಗ್ರೌಂಡ್ ಬಂಕರ್) ಕೆಲವು ಸಮಯ ‌ಇರಿಸಿದರು ಎಂದು ವರದಿಗಳು ತಿಳಿಸಿವೆ.

ಪೊಲೀಸ್ ಅಧಿಕಾರಿ ಡೆರಿಕ್ ಚವಿನ್ ಎಂಬಾತ ಖೋಟಾ ನೋಟು ಚಲಾವಣೆ ಆರೋಪದ ಮೇಲೆ ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಎಂಬಾತನನ್ನು ಬಂಧಿಸಿ ಆತನ ಕುತ್ತಿಗೆಯನ್ನು ಮೊಣಕಾಲಗಳ ಮಧ್ಯೆ ಎಂಟು ನಿಮಿಷಗಳಿಗೂ ಹೆಚ್ಚು ಸಮಯ ಅದುಮಿ ಹಿಡಿದ ಪರಿಣಾಮವಾಗಿ ಫ್ಲಾಯ್ಡ್ ಉಸಿರು ಗಟ್ಟಿ ಮೃತಪಟ್ಟಿದ್ದ. ಪೊಲೀಸ್ ಅಧಿಕಾರಿಯ ಹಿಂಸೆ ಖಂಡಿಸಿ ಮಿನ್ಸಿಸೋಟಾದಲ್ಲಿ ಪ್ರಾರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಅಮೆರಿಕದ ಪ್ರಮುಖ ನಗರವಾದ ಲಾಸ್ ಏಂಜಲೀಸ್, ಚಿಕಾಗೋ ಸೇರಿದಂತೆ 25ಕ್ಕೂ ಪ್ರಮುಖ ‌ರಾಜ್ಯಗಳಿಗೆ ವ್ಯಾಪಿಸಿದ್ದು, ಭಾರೀ ಹಿಂಸಾಚಾರ ಮತ್ತು ಸಂಘರ್ಷಕ್ಕೆ ಕಾರಣವಾಗಿದೆ.

ಅಮೆರಿಕದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ ಸಾವಿರಾರು ಜನರು ಬೀದಿಗಿಳಿದು ದೊಡ್ಡ ಮಾಲ್‍ಗಳು ಮತ್ತು ವಾಣಿಜ್ಯ ಸಂಕೀರ್ಣಗಳ ಮೇಲೆ ದಾಳಿ ನಡೆಸಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಅಂಗಡಿಗಳು, ಶಾಪಿಂಗ್ ಕಾಂಪ್ಲೆಕ್ಸ್, ಕಾರುಗಳು ಸೇರಿದಂತೆ ಸಿಕ್ಕಸಿಕ್ಕ ವಸ್ತುಗಳಿಗೆ ಪ್ರತಿಭಟನೆಕಾರರು ಬೆಂಕಿ ಹಚ್ಚುತ್ತಿದ್ದಾರೆ ಮತ್ತು ತಡೆಯಲು ಬಂದವರನ್ನು ನಿರ್ದಯವಾಗಿ ಸಾಯಿಸುತ್ತಿದ್ದಾರೆ.
ಈಗಾಗಲೇ ಕೊರೊನಾ ಸೋಂಕಿನಿಂದ ಕಂಗೆಟ್ಟಿರುವ ಅಮೆರಿಕದಲ್ಲಿ ಪ್ರತಿಭಟನೆಕಾರರು ಸಾಮಾಜಿಕ ಅಂತರ ಕಾಯ್ಡುಕೊಳ್ಳದೇ ಹಿಂಸಾತ್ಮಕ ಪ್ರತಿಭಟನೆಗೆ ಇಳಿದಿರುವ ಹಿನ್ನಲೆಯಲ್ಲಿ, ಸೋಂಕು ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಹಿಂಸಾಚಾರ ಮತ್ತಷ್ಟು ಹಿಂಸಾತ್ಮಕ ರೂಪ ತಳೆದಿರುವ ಹಿನ್ನಲೆಯಲ್ಲಿ ಅಮೆರಿಕದ 50 ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ

Tags: americaDonald TrumpUswhite house
ShareTweetSendShare
Join us on:

Related Posts

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

by Shwetha
July 28, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram