‘ಇತ್ತೀಚಿನ ವರ್ಷಗಳಲ್ಲಿ ಅಮೆರಿಕ–ರಷ್ಯಾ ಸಂಬಂಧ ತೀರಾ ಕನಿಷ್ಠ ಮಟ್ಟಕ್ಕಿಳಿದಿದೆ’
ಇತ್ತೀಚೆಗೆ ಅಮೆರಿಕ-ರಷ್ಯಾ ನಡುವಿನ ಆಂತರಿಕ ಸಂಬಂಧ ತೀರಾ ಬಿಗಡಾಯಿಸಿದ್ದು, ಇದೇನು ಜಗತ್ತಿಗೆ ಗೊತ್ತಿಲ್ಲದ ಸಂಗತಿಯಾಗಿಯೂ ಉಳಿದಿಲ್ಲ. ಇದೀಗ ಈ ಬಗ್ಗೆ ರಷ್ಯಾ ಅಧ್ಯಕ್ಷರೇ ಹೇಳಿಕೊಂಡಿದ್ದಾರೆ.
ರಷ್ಯಾ – ಅಮೆರಿಕಾದ ಸಂಬಂಧ ಇತ್ತೀಚಿನ ವರ್ಷಗಳಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಇನ್ನೂ ಮುಂದಿನ ವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನಿಗದಿಯಾಗಿರುವ ಭೇಟಿಗೂ ಮುನ್ನ ಮಾಧ್ಯಮಗಳ ಬಳಿ ಮಾತನಾಡಿರುವ ಪುಟಿನ್ ಈ ಹೇಳಿಕೆ ನೀಡಿದ್ದಾರೆ. ಅಲ್ಲದೇ ಪುಟಿನ್ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೊಗಳಿದ್ದಾರೆ. ‘ಟ್ರಂಪ್ ಅಸಾಧಾರಣ ವ್ಯಕ್ತಿ, ಪ್ರತಿಭಾವಂತ‘ ಎಂದಿದ್ದಾರೆ. ರಾಜಕಾರಣಿಯಾಗಿ ಬೈಡೆನ್ ಅವರು ಟ್ರಂಪ್‌ಗಿಂತ ಬಹಳ ಭಿನ್ನರು ಎಂದು ಅಭಿಪ್ರಾಯ ಪಟ್ಟಿದ್ದಾರೆ.
‘ನಾವು ದ್ವಿಪಕ್ಷೀಯ ಸಂಬಂಧ ಹೊಂದಿದ್ದೇವೆ. ಅದು ಇತ್ತೀಚಿನ ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕಿಳಿದಿದೆ, ಹದಗೆಟ್ಟಿದೆ’ ಎಂದು ಪುಟಿನ್ ಹೇಳಿದ್ದಾರೆ. ಅದು ಅಂದ್ಹಾಗೆ ಪುಟಿನ್ ಮತ್ತು ಬೈಡ್‌ನ್ ಮುಂದಿನ ಬುಧವಾರ ಜಿನಿವಾದಲ್ಲಿ ಭೇಟಿಯಾಗಲಿದ್ದಾರೆ.
ಅಲ್ಲದೇ ಪುಟಿನ್ ಅವರನ್ನ ಕೊಲೆಗಾರ ಎಂದು ಕರೆದಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಇಂಥ ಡಜನ್ ಆರೋಪಗಳನ್ನು ಕೇಳಿದ್ದೇನೆ. ನಾನು ಕನಿಷ್ಠ ಚಿಂತೆಯನ್ನೂ ಮಾಡದಂಥ ವಿಚಾರವಿದು ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.