America Shootout : ಕ್ಯಾಲಿಪೋರ್ನಿಯಾದಲ್ಲಿ ಮತ್ತೊಂದು ಗುಂಡಿನ ದಾಳಿ – 7 ಜನ ಸಾವು…
ಎರಡು ದಿನಗಳ ಅಂತರದಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಇಲ್ಲಿನ ಹಾಫ್ ಮೂನ್ ಬೇ ಪ್ರದೇಶದಲ್ಲಿ ಸೋಮವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ. ಇದಲ್ಲದೆ, ಅಯೋವಾ ರಾಜ್ಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಹಾಫ್ ಮೂನ್ ಬೇ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇ ಪ್ರದೇಶದಲ್ಲಿ ಎರಡು ಕಿಮೀ ದೂರದಲ್ಲಿ ಎರಡು ಗುಂಡಿನ ಘಟನೆಗಳು ನಡೆದಿವೆ. ಒಂದು ಮಶ್ರೂಮ್ ಫಾರ್ಮ್ ಬಳಿ ಮತ್ತು ಇನ್ನೊಂದು ಟ್ರಕ್ ಸ್ಟ್ಯಾಂಡ್ ಬಳಿ. ಈ ಎರಡೂ ಘಟನೆಗಳಲ್ಲಿ ಒಟ್ಟು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ನಂತರ 67 ವರ್ಷದ ವ್ಯಕ್ತಿಯನ್ನ ಬಂಧಿಸಿ ಆತನನ್ನ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಮೊನ್ನೆ ಶನಿವಾರ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 11 ಜನರು ಪ್ರಾಣ ಕಳೆದುಕೊಂಡರು.
America Shootout: Another shooting in California – 7 dead…