ಹೊಸ ವೈರಸ್ ಗುರುತಿಸಿದ ನೂರು ದಿನದೊಳಗೆಯೇ ಲಸಿಕೆ ತಯಾರಿಸುವ ಗುರಿ – ಅಮೆರಿಕಾ
ಅಮೆರಿಕಾ : ಶ್ವೇತಭವನದ ಹೊಸ ವೈಜ್ಞಾನಿಕ ಸಲಹೆಗಾರ ಎರಿಕ್ ಲ್ಯಾಂಡರ್ , ಹೊಸ ವೈರಸ್ ಗುರುತಿಸಿದ ನೂರು ದಿನದೊಳಗೆಯೇ ಲಸಿಕೆ ತಯಾರಿಸುವ ಗುರಿ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. ವೈಜ್ಞಾನಿಕ ಸಲಹೆಗಾರರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸಂದರ್ಶನವೊಂದ್ರಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ‘ಮುಂದಿನ ದಿನಗಳಲ್ಲಿ ಅಮೆರಿಕ ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಲಿದೆ. ಪ್ಲಗ್ ಆ್ಯಂಡ್ ಪ್ಲೇ ಲಸಿಕೆಗಳೊಂದಿಗೆ ಸಾಂಕ್ರಾಮಿಕ ರೋಗವನ್ನು ಎದುರಿಸಲು ಜಗತ್ತನ್ನು ಅಣಿಗೊಳಿಸಲಾಗುತ್ತದೆ. ಜತೆಗೆ, ಸಾಂಕ್ರಾಮಿಕ ರೋಗದ ವಿರುದ್ಧ ಔಷಧಗಳು ಹೇಗೆ ಕೆಲಸ ಮಾಡುತ್ತವೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡುವ ವಿಧಾನ, ಹವಾಮಾನ ಬದಲಾವಣೆ ನಿಯಂತ್ರಣ ಕುರಿತು ಸಂಶೋಧನೆಗಳನ್ನು ನಡೆಸಲಿದೆ‘ ಎಂದು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.