ಹಮಾಸ್ ಉಗ್ರರ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಗೆ ಅಮೆರಿಕಾದ ಬೆಂಬಲ ಇದೆ – ಜೋ ಬೈಡೆನ್
ಅಮೆರಿಕಾ : ಇಸ್ರೇಲ್ ನ ಗಾಜಾಪಟ್ಟಿಯಲ್ಲಿ ಎಲ್ಲಿ ನೋಡಿದ್ರು ಹೆಣಗಳ ರಾಶಿ , ಹಿಂಸಾತ್ಮಕ ವಾತಾವರಣ ನಿರ್ಮಾಣವಾಗಿದೆ.. ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ದಾಳಿಗೆ ಅಲ್ಲಿನ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಹಮಾಸ್ ಉಗ್ರರ ವಿರುದ್ಧ ಮುಗಿಬಿದ್ದಿರುವ ಇಸ್ರೇಲ್ ಸೇನೆ ಸೋಮವಾರವೂ ಗಾಜಾ ಪಟ್ಟಿಯ ಮೇಲೆ ಬಾಂಬ್ ದಾಳಿ ಮುಂದುವರಿಸಿವೆ. ಈ ನಡುವೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ತನ್ನನ್ನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕು ಹೊಂದಿರುವ ಇಸ್ರೇಲ್ ಗೆ ಅಮೆರಿಕಾದ ಬೆಂಬಲ ಇದೆ ಎಂದು ತಿಳಿಸಿದ್ದಾರೆಂದು ಶ್ವೇತಭವನದ ಮೂಲಗಳಿಂದು ತಿಳಿದುಬಂದಿದೆ.
ಇಸ್ರೇಲ್ ಮೇಲೆ ನಡೆಯುತ್ತಿರುವ ರಾಕೆಟ್ ದಾಳಿಯನ್ನು ಬೈಡನ್ ವಿರೋಧಿಸಿದ್ದಾರೆ. ಅಲ್ಲದೇ, ನಾಗರಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡುವಂತೆ ತಿಳಿಸಿದ್ದಾರೆಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಇದೇ ವೇಳೆ ಇಸ್ರೇಲ್ ನಲ್ಲಿ ಭುಗೆಲೆದ್ದಿರುವ ಕೋಮು ಹಿಂಸಾಚಾರವನ್ನು ತಹಬಂದಿಗೆ ತರುವುದು ಹಾಗೂ ಜೆರುಸಲೇಮ್‌ನಲ್ಲಿ ಶಾಂತಿ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ನೇತನ್ಯಾಹು ಸರ್ಕಾರ ಕೈಗೊಂಡ ಕ್ರಮಗಳನ್ನು ಬೈಡನ್ ಶ್ಲಾಘಿಸಿದರು ಎಂದು ತಿಳಿಸಿದ್ದಾರೆ. ಜೊತೆಗೆ ಕದನವಿರಾಮ ಘೋಷಣೆಗೆ ಅಮೆರಿಕ ಬೆಂಬಲ ನೀಡುತ್ತದೆ. ಈ ನಿಟ್ಟಿನಲ್ಲಿ ಈಜಿಪ್ಟ್‌ನೊಂದಿಗೆ ನಡೆಸಿದ ಮಾತುಕತೆ ಕುರಿತಂತೆಯೂ ಬೈಡನ್ ಅವರು ನೇತನ್ಯಾಹುಗೆ ಮಾಹಿತಿ ನೀಡಿರುವುದಾಗಿ ಶ್ವೇತಭವನದ ಪ್ರಕಟಣೆ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








