ಕೋವಿಡ್ ಸಂಕಷ್ಟ – ಭಾರತದ ಅಂಗವಿಕಲರ ನೆರವಿಗೆ ಅಮೆರಿಕ ಸಂಸ್ಥೆ – 72.54 ಲಕ್ಷ ರೂಪಾಯಿ ದೇಣಿಗೆ
ಅಮೆರಿಕಾ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಭಾರತೀಯ ಅಮೆರಿಕನ್ ಸ್ವಯಂಸೇವಾ ಸಂಸ್ಥೆಯೊಂದು ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೊಳಗಾಗಿರುವ ಅಂಗವಿಕಲರಿಗೆ ನೆರವಾಗಿದೆ. 1 ಲಕ್ಷ ಡಾಲರ್ (72.54 ಲಕ್ಷ ರೂಪಾಯಿ) ಸಂಗ್ರಹಿಸಿದೆ.
‘ಸಾಂಕ್ರಾಮಿಕದ ಸಂದರ್ಭದಲ್ಲಿ ಅಂಗವಿಕಲರಿಗೆ ದಿನಸಿ, ಪಿಪಿಇ ಕಿಟ್ ಸೇರಿದಂತೆ ಇತರೆ ವಸ್ತುಗಳನ್ನು ಒದಗಿಸಲು 1 ಲಕ್ಷ ಡಾಲರ್ ಸಂಗ್ರಹಿಸಲಾಗಿದೆ’ ಎಂದು ಲಾಸ್ ಏಜಂಲೀಸ್ ಮೂಲದ ‘ವಾಯ್ಸ್ ಆಫ್ ಸ್ಪೆಷಲಿ ಏಬಲ್ಡ್ ಪೀಪಲ್’(ವಿಒಎಸ್‌ಎಪಿ) ಸಂಘಟನೆಯು ತಿಳಿಸಿದೆ.
‘ಕೋವಿಡ್‌ನಿಂದಾಗಿ ಹಿರಿಯ ನಾಗರಿಕರು, ಅಂಗವಿಕಲರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಭಾರತದಲ್ಲಿ ಈವರೆಗೆ 4,500ಕ್ಕೂ ಹೆಚ್ಚು ದಿನಸಿ ಮತ್ತು ಪಿಪಿಇ ಕಿಟ್‌ಗಳನ್ನು ವಿತರಿಸಲಾಗಿದ್ದು, 10,000 ಅಂಗವಿಕಲರನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ’ ಎಂದು ಎನ್‌ಜಿಒ ಹೇಳಿಕೆ ಬಿಡುಗಡೆ ಮಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.