ರೆಡ್ ಡ್ರ್ಯಾಗನ್’ ವಿರುದ್ಧ ಗುಡುಗಿದ ‘ವಿಶ್ವದ ದೊಡ್ಡಣ್ಣ’

1 min read

ರೆಡ್ ಡ್ರ್ಯಾಗನ್’ ವಿರುದ್ಧ ಗುಡುಗಿದ ‘ವಿಶ್ವದ ದೊಡ್ಡಣ್ಣ’

ಅಮೆರಿಕಾ : ರೆಡ್ ಡ್ರ್ಯಾಗನ್ ಚೀನಾ ವಿರುದ್ಧ ವಿಶ್ವದ ದೊಡ್ಡಣ್ಣ ಅಮೆರಿಕಾ ಮತ್ತೊಮ್ಮೆ ಗುಡುಗಿದೆ. ಫಾಲುನ್ ಗಾಂಗ್ ಸಾಧಕರನ್ನು ಬಂಧಿಸಿರುವುದು ಸೇರಿದಂತೆ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಚೀನಾದ ವಿರುದ್ಧ ಅಮೆರಿಕಾ ಆಕ್ರೋಶ ಹೊರಹಾಕಿದೆ.

ಈ ಮೂಲಕ ಅಮೆರಿಕ-ಚೀನಾ ಶೀತಲಸಮರ ಮುಂದುವರಿದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್, ಚೀನಾ ಮತ್ತು ಇತರ ದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದುರುಪಯೋಗಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

American

ಯುಎಸ್ ತನ್ನ 2020 ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (IRF) ವರದಿಯನ್ನು ಬಿಡುಗಡೆ ಮಾಡಿದೆ. ಇದು ಸುಮಾರು 200 ದೇಶಗಳು ಮತ್ತು ಪ್ರಾಂತ್ಯಗಳಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಸ್ಥಿತಿಗತಿಯ ವಿವರವಾದ ವಾಸ್ತವಿಕತೆಯನ್ನು ಒದಗಿಸುತ್ತದೆ. ಸರ್ಕಾರಗಳು ಮಾಡಿದ ಧಾರ್ಮಿಕ ಉಲ್ಲಂಘನೆಗಳು ಮತ್ತು ನಿಂದನೆಗಳ ವರದಿ ದಾಖಲಿಸಿದೆ.

ಈ ವರ್ಷದ IRF ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಬ್ಲಿಂಕೆನ್, 56 ದೇಶಗಳು ಧಾರ್ಮಿಕ ಸ್ವಾತಂತ್ರ್ಯಕ್ಕೆ ಅವಕಾಶ ಕೊಟ್ಟಿಲ್ಲ. ಮ್ಯಾನ್ಮಾರ್, ಇರಾನ್, ಚೀನಾ ಪ್ರಮುಖ ಸ್ಥಾನದಲ್ಲಿವೆ ಎಂದು ಹೇಳಿದ್ದಾರೆ. ಪ್ರಪಂಚದಾದ್ಯಂತದ ಎಲ್ಲಾ ರೀತಿಯ ತಾರತಮ್ಯ ಹೋಗಲಾಗಿಸಲು ಮಾನವ ಹಕ್ಕುಗಳ ಆಯೋಗ ಸೇರಿದಂತೆ ಸಾಮಾಜಿಕ ಸಂಸ್ಥೆಗಳೊಂದಿಗೆ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd