ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸಂವಿಧಾನ ಹತ್ಯಾ ದಿವಸ್ ಘೋಷಣೆ ಮಾಡಿದ ಅಮಿತ್ ಶಾ

ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ

Author2 by Author2
July 12, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಹತ್ಯಾ ದಿವಸ್ (Samvidhaan Hatya Diwas) ಎಂದು ಪ್ರತಿ ವರ್ಷ ಜೂನ್‌ 25ನ್ನು ಘೋಷಿಸಿದ್ದಾರೆ.

ಈ ಮೂಲಕ ತುರ್ತು ಪರಿಸ್ಥಿತಿಯ (Emergency Day) ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಮಿತ್‌ ಶಾ, ಸಂವಿಧಾನ ಹತ್ಯಾ ದಿವಸ್‌ ಆಚರಣೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಕೇಂದ್ರ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಸುತ್ತೋಲೆ ಹಂಚಿಕೊಂಡಿದ್ದಾರೆ.

Related posts

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

March 18, 2026
ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

March 17, 2026

ಪ್ರತಿ ವರ್ಷ ʻಸಂವಿಧಾನ ಹತ್ಯಾ ದಿವಸ್ʼ ಆಚರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 1975ರ ಜೂನ್ 25 ರಂದು, ಅಂದಿನ ಪ್ರಧಾನಿ ಇಂದಿರಾಗಾಂಧಿ (Indira Gandhi) ಸರ್ವಾಧಿಕಾರಿ ಮನಸ್ಥಿತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು. ತುರ್ತು ಪರಿಸ್ಥಿತಿ ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು. ಯಾವ ತಪ್ಪಿಲ್ಲದೇ ಲಕ್ಷಾಂತರ ಜನರನ್ನು ಕಂಬಿಯ ಹಿಂದೆ ಸರಿಸಲಾಯಿತು. ಮಾಧ್ಯಮಗಳ ಧ್ವನಿ ಮೌನಗೊಳಿಸಲಾಯಿತು. ಹೀಗಾಗಿ ಪ್ರತಿ ವರ್ಷ ಜೂನ್ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್ʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಪರಿಸ್ಥಿತಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ತುರ್ತು ಪರಿಸ್ಥಿತಿ ಹೇರಲು ಕಾರಣವಾದ ಮನಸ್ಥಿತಿಯು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿದೆ. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಹೀಗಾಗಿಯೇ ಜನರು ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.

ತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. 1975ರ ಜೂನ್‌ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್‌ ಅಲಿ ಅಹಮದ್‌ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಪ್ರಧಾನಿ ಇಂದಿರಾಗಾಂಧಿ (Indira Gandhi) ಅವರ ಸಲಹೆ ಮೇರೆಗೆ ಈ ಕ್ರಮ ತೆಗೆದುಕೊಂಡಿದ್ದರು. ತುರ್ತು ಪರಿಸ್ಥಿತಿ ಜಾರಿಯಾಗಿ ಕಳೆದ ಜೂನ್‌ 25ಕ್ಕೆ 49 ವರ್ಷ ತುಂಬಿದ್ದು, 50ನೇ ವರ್ಷ ಆರಂಭವಾಗಲಿದೆ. ಹೀಗಾಗಿ ಸರ್ಕಾರ ಸಂವಿಧಾನ ಹತ್ಯಾ ದಿವಸ್ ಆಚರಣೆಗೆ ಮುಂದಾಗಿದೆ.

Tags: Amit Shah announced Constitution Hatya Divas
ShareTweetSendShare
Join us on:

Related Posts

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram