Amit shah : ಇಂದು ಮತ್ತು ನಾಳೆ ಮಂಡ್ಯ ವಿವಿಗೆ ರಜೆ ಘೋಷಣೆ…
ಮುಂದಿನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರುತ್ತಲಿವೆ. ಹಳೆ ಮೈಸೂರು ಭಾಗದ ಮತದಾರರನ್ನು ಸೆಳೆಯಲು ಬಿಜೆಪಿ ಕಸರತ್ತು ಆರಂಭಿಸಿದ್ದು, ಇದಕ್ಕೆ ಪೂರಕವಾಗಿ ಇಂದು ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಇಂದಿನಿಂದ ಮೂರು ದಿನ ಹಳೆ ಮೈಸೂರು ಭಾಗದಲ್ಲಿ ಅಮಿತ್ ಶಾ ಪ್ರವಾಸ ಕೈಗೊಳ್ಳಲಿದ್ದು, ನಾಳೆ ಮಂಡ್ಯಕ್ಕೆ ಭೇಟಿ ನೀಡಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ಘೋಷಣೆ ಮಾಡಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಿ ಸಿ ಡಾ.ಗೋಪಾಲಕೃಷ್ಣ ವಿ ವಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುತ್ತದೆ. ಸಮಾವೇಶ ಆಯೋಜನೆ ಹಿನ್ನೆಲೆ ವಿವಿಗೆ ರಜೆ ಘೋಷಣೆ ಮಾಡಲಾಗಿದೆ.
Amit shah : Holiday announced for Mandya University today and tomorrow…