ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯುವುದಿಲ್ಲ: ಅಮಿತ್ ಶಾ
ಬೆಂಗಳೂರು: ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದ ಅವಧಿ ಪೂರ್ವ ಚುನಾವಣೆ ಮಾತಿಗೆ ತಿಲಾಂಜಲಿ ಹೇಳಿದ್ದಾರೆ.
ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಏಪ್ರಿಲ್ 01 ರಂದು ನಡೆದ ಸಭೆಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಬೇರೆ ಪಕ್ಷಗಳೊಂದಿಗೂ ಚುನಾವಣಾ ಪೂರ್ವ ಹೊಂದಾಣಿಕೆ ಇಲ್ಲ. ಇದಕ್ಕೆ ಕಾರಣವನ್ನು ಕರೆ ಮಾಡಿ ತಿಳಿಸುವುದಾಗಿ ಅಮಿತ್ ಶಾ ಹೇಳಿರುವುದು ತಿಳಿದುಬಂದಿದೆ.
ಇನ್ನೂ ನವೆಂಬರ್, ಡಿಸೆಂಬರ್ನಲ್ಲಿ ಗುಜರಾತ್ ಚುನಾವಣೆ ಮಾತ್ರ ಇದೆ. ಮುಂದಿನ ವರ್ಷ ಮೇನಲ್ಲಿ ಕರ್ನಾಟಕ ಚುನಾವಣೆ ಮಾತ್ರ ಇದೆ. ಗುಜರಾತ್, ಕರ್ನಾಟಕ ಚುನಾವಣೆ ಮಧ್ಯೆ ಸಮಯ ಹೆಚ್ಚಿದೆ. ಈ ನಡುವೆ ಮತ್ತೊಂದು ಜನಪ್ರಿಯ ಬಜೆಟ್ ಕೂಡ ನೀಡಬಹುದು.
ಅಲ್ಲದೇ ಪಕ್ಷ ಸಂಘಟನೆ ಮಾಡುವುದಕ್ಕೆ ನಿಮಗೆ ಬೇಕಾದಷ್ಟು ಸಮಯವಿದೆ. ಹೀಗಾಗಿ ಬೇರೆ ಪಕ್ಷದ ಜತೆ ಹೊಂದಾಣಿಕೆ ಕೇವಲ ಗಾಳಿ ಸುದ್ದಿ. ದೆಹಲಿಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಆತಂಕ ಬೇಡ ಎಂದು ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ತಿಳಿಸಿರುವ ಬಗ್ಗೆ ಮಾಹಿತಿ ಲಭಿಸಿದೆ.