ಜ.17ಕ್ಕೆ ಭದ್ರಾವತಿಗೆ ಅಮಿತ್ ಶಾ ಭೇಟಿ
ಶಿವಮೊಗ್ಗ : ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 17ರಂದು ಭದ್ರಾವತಿಗೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಸಂಸದ ಬಿ.ವೈ ರಾಘವೇಂದ್ರ ಮಾಹಿತಿ ನೀಡಿದ್ದು, ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಆರ್ ಎಎಫ್ ಕೇಂದ್ರವನ್ನು ಶಿವಮೊಗ್ಗದ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಪ್ರಾರಂಭಿಸಲಾಗುತ್ತಿದೆ.
ಈ ಹಿನ್ನೆಲೆ ಗುದ್ದಲಿ ಪೂಜೆ ನೆರವೇರಿಸುವ ಉದ್ದೇಶದಿಂದ ಅಮಿತ್ ಶಾ ಆಗಮಿಸಲಿದ್ದಾರೆ.
ಅಂದು ಅಮಿತ್ ಶಾ ಬೆಳಗ್ಗೆ 11 ಗಂಟೆಗೆ ಅಗಮಿಸಿ ಗುದ್ದಲಿ ಪೂಜೆ ನಡೆಸಿ, ನಂತರ ಹೊಸಪೇಟೆಗೆ ತೆರಳಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಡಿಸಿ ಕೆ.ಬಿ.ಶಿವಕುಮಾರ್, ಎಸ್ ಪಿ ಶಾಂತರಾಜು, ಭದ್ರಾವತಿ ಡಿವೈಎಸ್ಪಿ ಕೃಷ್ಣಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಆರ್ ಎಎಫ್ ನ ಮುಖ್ಯಸ್ಥರು ಹಾಜರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









